ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು. ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ ಸ್ಫರ್ಧೆಯಲ್ಲಿ ಮಮತಾ ಪುಟ್ಟಸ್ವಾಮಿ ಅವರು ಪ್ರಶಸ್ತಿ ಪಡೆಯುವ ಮೂಲಕ ತನ್ನ ಪ್ರತಿಭೆಯನ್ನು ಮೆರೆದಿದ್ದಾರೆ. ಮಿಸೆಸ್ ಇಂಡಿಯಾ ಕನೆಕ್ಟಿಕಟ್ 2018 ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮಮತಾ ಪುಟ್ಟಸ್ವಾಮಿ
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು
ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು
ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು
ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್
ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ
ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.ಇನ್ನಷ್ಟು ಮಾಹಿತಿ ತನಿಖೆಯ ನಂತರವೇ ತಿಳಿಯಬೇಕಿದೆ
ಮುದರಂಗಡಿಯಲ್ಲಿದ್ದ ಪಾರ್ಟಿಯೊಂದರಲ್ಲಿ ಪಾಲ್ಗೊಂಡು ಎರ್ಮಾಳಿಗೆ ಮರಳುತ್ತಿದ್ದ ಯುವಕರಿಬ್ಬರಿದ್ದ ಸ್ಕೂಟರ್ ಅದಮಾರಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರು ಎರ್ಮಾಳು ಬಡಾ ನಿವಾಸಿಗಳಾದ ಪವನ್ ಹಾಗೂ ತಿಲಕ್ ಎಂದು ತಿಳಿದು ಬಂದಿದೆ. ಇವರು ಗೆಳೆಯರೊಂದಿಗೆ ಪಾರ್ಟಿ ಮುಗಿಸಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಬೇರೆ ವಾಹನದಲ್ಲಿದ್ದ ಇವರ ಗೆಳೆಯರು ಇವರನ್ನು ತಕ್ಷಣ ಪಡುಬಿದ್ರಿಯ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ


















