ಪುತ್ತೂರು: ಕೋವಿಡ್ ಬಂದ ಮೇಲೆ ಸಾರ್ವಜನಿಕರಲ್ಲಿ ಸರಕಾರಿ ಆಸ್ಪತ್ರೆಯ ಬಗ್ಗೆ ಹೆಚ್ಚು ವಿಶ್ವಾಸ ಬರುವಂತೆ ನಮ್ಮ ವೈದ್ಯರು ಮಾಡಿದ್ದಾರೆ ಈ ನಿಟ್ಟಿನಲ್ಲಿ ಅವರಿಗೆ ಮೊದಲಾಗಿ ಅಭಿನಂದನೆ ಸಲ್ಲಿಸಬೇಕು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಕಡಿಮೆ ಶೇ.1.94 ಪಾಸಿಟಿವ್ ರೇಟ್ ಇರುವುದು ನಮ್ಮ ತಾಲೂಕಿನಲ್ಲಿ ಈ ನಿಟ್ಟನಲ್ಲಿ ಮುಂಬರುವ ದಿನಗಳಲ್ಲಿ ಶಾಲೆಯನ್ನು
ಮಂಗಳೂರಿನ ಪಣಂಬೂರಿನ ಸಮುದ್ರ ತೀರದಲ್ಲಿ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ ಸಿಕ್ಕಿದಂತಾಗಿದೆ. ವಿ4 ನ್ಯೂಸ್‌ನ ವರದಿಗೆ ಎಚ್ಚೆತ್ತು ಮಂಗಳೂರು ಮಹಾನಗರ ಪಾಲಿಕೆ ಸ್ವಚ್ಛತಾ ಕಾರ್ಯವನ್ನ ಕೈಗೊಂಡಿದೆ. ಇನ್ನು ನಗರ ಪಾಲಿಕೆ ಸಿಬ್ಬಂದಿಗಳು ಸ್ವಚ್ಛ ಕಾರ್ಯವನ್ನು ಕೈಗೊಂಡಿದ್ದಾರೆ. ಪಣಂಬೂರು ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ಬೀಚ್ ಸೌಂದರ್ಯಕ್ಕೆ ಧಕ್ಕೆಯಾಗಿತ್ತು. ಸಮುದ್ರಕ್ಕೆ ಪ್ರವಾಸಿಗರೇ ಎಸೆದ ಕಸ ಈಗ ದೊಡ್ಡ
ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ
ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಮೊಂತೇರೊ ಅಫ್ಘಾನಿಸ್ತಾನದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಇದೀಗ ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮ್ಸಿ ಮೊಂತೆರೊ ಇಂದು ಉಳ್ಳಾಲದ ಉಳಿಯದಲ್ಲಿರುವ ತನ್ನ
ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಖಾಸಗಿ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ವರ್ಷ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವಿಟ್ಲ ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸು ನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ವಿಟ್ಲ ಮೂಲದವರು ಎನ್ನಲಾಗಿದೆ. ಸಂಬಂಧಿಕರು ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಪೊಲೀಸರು ಮನವಿ
ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ
ಎರ್ಮಾಳು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಅಟೋ ಹತ್ತಿಸಿಕೊಂಡ ಎಂಬ ನೆಪವೊಡ್ಡಿ ಬಸ್ ಚಾಲಕನೊರ್ವ ಅಟೋ ರಿಕ್ಷಾಕ್ಕೆ ಬಸ್‌ನ್ನು ಅಡ್ಡವಿರಿಸಿ ಗೂಂಡಾಗಿರಿ ಪ್ರದರ್ಶಿಸಿದ್ದಾನೆ ಎಂಬುದಾಗಿ ಆರೋಪಿಸಿ ಪಡುಬಿದ್ರಿ ಅಟೋ ರಿಕ್ಷಾ ಚಾಲಕರು ರಿಕ್ಷಾ ಬಂದ್ ನಡೆಸಿ ಪಡುಬಿದ್ರಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಘಟನೆ ನಡೆದಿದೆ. ಉಡುಪಿಯಿಂದ ಕಟೀಲಿಗೆ ಹೋಗುವ ಬಸ್ “ಶಫತ್” ಹೆಸರಿನ ಖಾಸಾಗಿ ಬಸ್ ಚಾಲಕ ಉಚ್ಚಿಲ ನಿವಾಸಿ
ಪಾದಚಾರಿ ಅಲೆಮಾರಿಯಂತ್ತಿದ್ದ ಯುವಕನೊರ್ವನಿಗೆ ಪಡುಬಿದ್ರಿ ಬೀಡು ಬಳಿ ರಾತ್ರಿ ಕಾರೊಂದು ಢಿಕ್ಕಿಯಾದ ಪರಿಣಾಮ ಆ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಮಾರು 35-40ರ ಹರೆಯದ ವ್ಯಕ್ತಿಯಾಗಿದ್ದ ಯುವಕ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಕಾರು ಡಿಕ್ಕಿಯಾಗಿದೆ. ಅಪಘಾತ ತೀವೃತೆಗೆ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತನಾಗಿದ್ದಾನೆ. ಈತ ಈ ಪರಿಸರದಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಉಡುಪಿ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು. ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಸೋಮವಾರ ಬೆಳಗ್ಗೆ ಮನೆ ಸೇರಿದ್ದರೆ,


















