Home Archive by category ಕರಾವಳಿ (Page 857)

ಇ.ಎಂ.ಎಸ್. ಗ್ರಂಥಾಲಯ ಸಮಿತಿಯಿಂದ ಓಣಂ ಆಚರಣೆ

ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು

ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮ

 ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು. ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಕುದ್ರೊಳಿ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ|ವಸಂತ್ ಕುಮಾರ್,

ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

 ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪಾದಕ ಸಂಘವನ್ನು ಆರಂಭಿಸಲು ಸೂಚನೆ ನೀಡಿದ್ದಾರೆ. ದೇಶದ

ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯದಿಂದ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಕುದ್ರೋಳಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಸಂಸದ ನಳಿನ್

ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್

ಪಡುಬಿದ್ರಿ ಸೇತುವೆ ಬಳಿ ಲಾರಿಯಡಿಗೆ ನುಸುಳಿದ ಬೈಕ್ ಸವಾರನಿಗೆ ಗಂಭೀರ ಗಾಯ

ಲಾರಿಯಡಿಗೆ ಬಿದ್ದ ಬೈಕ್ಕಿಂದ ಎಸೆಯಲ್ಪಟ್ಟ ಸವಾರ ಅದೃಷ್ಟವಶಾತ್ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿ ಬೆಳ್ಮಣ್ ನಿವಾಸಿ ವಿಲ್ಸನ್(44)  ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರಿಗೆ ಹೋಗುತ್ತಿದ್ದ ಲಾರಿಯಡಿಗೆ ಪಡುಬಿದ್ರಿ ಕಡೆಯಿಂದ ಅದಮಾರು ಪತ್ನಿ ಮನೆಕಡೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಪಡುಬಿದ್ರಿ ಸೇತುವೆ ಬಳಿ ಲಾರಿ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಸವಾರ ಎಸೆಯಲ್ಪಟ್ಟಿದ್ದಾನೆ. ಲಾರಿಯಡಿಗೆ

ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು

ಕಾಪು: ಲಾರಿ ಚಾಲಕ ವಿಶ್ರಾಂತಿಗಾಗಿ ಮಣ್ಣರಸ್ತೆಯಲ್ಲಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ನಡೆದಿದೆ. ಬೆಳಗಾವಿಯಿಂದ ಕೇರಳಕ್ಕೆ ಸಕ್ಕರೆ ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕ ಪಕ್ಕದ ಮರದಡಿ ಗಾಡಿ ನಿಲ್ಲಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಸವಾರ ತೊಕ್ಕೊಟ್ಟಿನ ನಿವಾಸಿ ದಿವಂಗತ

ಏಳೂರು ಮೊಗವೀರ ಮಹಾಸಭಾದ ವತಿಯಿಂದ ಹೆಜಮಾಡಿಯಲ್ಲಿ ಸಮುದ್ರ ಪೂಜೆ

ಏಳೂರು ಮೊಗವೀರ ಮಹಾ ಸಭಾದ ವತಿಯಿಂದ ಭಾನುವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ ನೆರವೇರಿಸಿ, ಸಮುದ್ರ ದೇವತೆಗೆ ಹಾಲು, ತೆಂಗಿನಕಾಯಿ ಸಮರ್ಪಣೆ ನೆರವೇರಿಸಲಾಯಿತು. ಪಲಿಮಾರು, ಗುಂಡಿ, ಸಣ್ಣ ಗುಂಡಿ, ಹೆಜಮಾಡಿ, ಮಟ್ಟು, ಆಚೆಮಟ್ಟು ಹಾಗೂ ಕನ್ನಂಗಾರು ಸೇರಿ ಏಳು ಊರಿನ ಮೊಗವೀರ ಬಾಂಧವರು ಹಾಲು, ತೆಂಗಿನ ಕಾಯಿ, ಫಲವಸ್ತುಗಳನ್ನು ತಂದು ಸಮುದ್ರ ದೇವರಿಗೆ ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ಏಳೂರು ಮೊಗವೀರ ಮಹಾ ಸಭಾದ ಸದಸ್ಯ, ಹೆಜಮಾಡಿ ಗ್ರಾಪಂ ಮಾಜಿ