Home Archive by category ಕರಾವಳಿ (Page 862)

ಕೋವಿಡ್ ನಿಯಮಾವಳಿ ಮೀರಿ ಪ್ರತಿಭಟನೆ ನಡೆಸಿದ್ದರೆ ಕ್ರಮ : ಪುತ್ತೂರು ಎ.ಸಿ. ಡಾ. ಯತೀಶ್ ಉಳ್ಳಾಲ್ ಎಚ್ಚರಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ

ಅಂತರ್ ರಾಜ್ಯ ಗಡಿ ನಿಯಂತ್ರಣ:ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯಲ್ಲಿ ಮಧ್ಯಂತರ ಆದೇಶ ಪ್ರಕಟ

ಮಂಜೇಶ್ವರ : ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸಲು ಕರ್ನಾಟಕ ರಾಜ್ಯ ಸರ್ಕಾರ ಗಡಿಗಳಲ್ಲಿ ನಿಷೇಧ ಹೇರಿರುವುದಕ್ಕಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆ.25 ಕ್ಕೆ ಮುಂದೂಡಿದ್ದು, ಈ ಮಧ್ಯೆ ದಕ್ಷಿಣ ಕನ್ನಡ ಪ್ರವೇಶಿಸಲು ಆಂಬುಲೆನ್ಸ್ ಗಳ ಹೊರತು ಇತರ ವಾಹನಗಳಲ್ಲೂ ಚಿಕಿತ್ಸೆಗೆ ತೆರಳುವವರನ್ನು ಯಾವುದೇ ಪರಿಶೋಧನೆಗೊಳಪಡಿಸದೆ(ಆರ್ ಟಿ ಪಿ ಸಿ ಆರ್ ) ತೆರಳಲು ಅವಕಾಶ ನೀಡಬೇಕು ಎಂದು ಮಂಗಳವಾರ ಹೈಕೋರ್ಟ್ ಮಧ್ಯಂತರ

ಕೌಟುಂಬಿಕ ಕಲಹ : ದರೆಗುಡ್ಡೆಯಲ್ಲಿ ಪತ್ನಿಯನ್ನು ಕೊಂದ ಪತಿ

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿ ಪತ್ನಿಯನ್ನು ಕೊಂದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುನೀತಾ(30 ) ಸಾವನ್ನಪ್ಪಿದಾಕೆ. ಪತಿ ಮೂಡುಬಿದಿರೆಯ ದಿನ್ ರಾಜ್ ನನ್ನು ಇಂದು ಮುಂಜಾನೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ಹೆಂಡತಿಯ ತಲೆಗೆ ಹೊಡೆದಿದ್ದಾನೆ. ಆಗ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ

ಸ್ವಾತಂತ್ರ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣ:ಆರೋಪಿಗಳಿಗೆ ಜಾಮೀನು

ಸ್ವಾತಂತ್ರ್ಯೋತ್ಸವದ ದಿನದಂದು ಪುತ್ತೂರು ತಾಲೂಕು ಕಬಕ ಗ್ರಾಮ ಪಂಚಾಯತ್ ಆವರಣದಲ್ಲಿ, ಕೇಂದ್ರ ಸರ್ಕಾರದ ಅಜಾದಿ ಕಾ ಅಮೃತ ಮಹೋತ್ಸವದ ಆಚರಣೆ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಹಾಗೂ ಭಾರತ ಮಾತೆಯ ಭಾವಚಿತ್ರವಿರುವ ವಾಹನದ ಚಲನೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಬಂಧನಕ್ಕೆ ಒಳಗಾದ ಕೇವಲ 48 ಗಂಟೆಗಳ ಒಳಗಡೆ ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪ್ರಕರಣವೂ ಸಾರ್ವಜನಿಕ ವಲಯದಲ್ಲಿ ಭಾರೀ

ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕೆ ಕಾರ್ಡ್ ಚಳವಳಿ: ಮನೋಹರ ಶೆಟ್ಟಿ

ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡುಕಂಬಳಗುತ್ತು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್‌ಗೆ ಮಹತ್ವಕೊಡಿ: ಬಿ.ಸಿ. ರೋಡ್‌ನಲ್ಲಿ ಸಚಿವ ಎಸ್. ಅಂಗಾರ

ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ

ಕಬಕ ಪ್ರಕರಣ: ಮೂಲ್ಕಿ-ಮೂಡುಬಿದಿರೆ ಬಿಜೆಪಿ ಖಂಡನೆ

ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗ ಸಂಘಟನೆಗಳ ನಿಷೇಧಕ್ಕಾಗಿ ಮತ್ತು ಕಬಕ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಟಿಪ್ಪು ಸುಲ್ತಾನ್ ನೈಜ್ಯ ಸ್ವಾತಂತ್ರ್ಯ

ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ

2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ಪ್ರಶಸ್ತಿಗೆ 15 ಮಂದಿ ಆಯ್ಕೆಯಾಗಿದ್ದಾರೆ. ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಚಿ.ಸು.ಕೃಷ್ಣಶೆಟ್ಟಿ ಸೇರಿದಂತೆ 15 ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಆ.18ರಂದು ಸಂಜೆ 6.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಿ