Home Archive by category ಕರಾವಳಿ (Page 866)

ಪರ್ತಗಳಿ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮಿಗಳು ಅಸ್ತಂಗತ

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಸಿದ ಶ್ರೀಗಳ ಪೂರ್ವಾಶ್ರಮ ಹೆಸರು ರಾಘವೇಂದ್ರ. ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ

ಬಿಜೆಪಿ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ಕಾಂಗ್ರೆಸ್ ಟ್ವೀಟ್ ಮೂಲಕ ಲೇವಡಿ

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ

ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ

ಮಾವಿನ ಎಲೆ 290..! 64% ಡಿಸ್ಕೌಂಟ್ ಆಗಿ 109..!

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್‍ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್‍ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ 109 ರೂಪಾಯಿಯಾಗಿದೆ. ಮೊನ್ನೆ ಹಲಸಿನ ಬೀಜಕ್ಕೆ ಇಂದು ಮಾವಿನ ಎಲೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು.

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.

“ಯಾರಿಗೂ ಹೇಳ್ಬೇಡಿ” – ತನಿಖೆಗೆ ಸಚಿವರನ್ನ ಒತ್ತಾಯ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ

ಎಲ್ಲೂರು ಪೆಜತಕಟ್ಟೆ ಬಳಿ ಕಾರು ಅಪಘಾತ, ಒರ್ವ ಮೃತ್ಯು

ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಸಮೀಪದ ಪೆಜತಕಟ್ಟೆ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.  ಕಟಪಾಡಿ ಪಳ್ಳಿಗುಡ್ಡೆ ನಿವಾಸಿ ರವೀಂದ್ರ ಪೂಜಾರಿ(37) ಮೃತಪಟ್ಟವರಾಗಿದ್ದು,ಇವರು ಭಾನುವಾರ ರಾತ್ರಿ ಎಲ್ಲೂರಿನಲ್ಲಿರುವ ಸ್ನೇಹಿತ ಮನೆಗೆ ಹೋಗಿ ಹಿಂತಿರುಗಿ ಬರುತ್ತಿರುವ ವೇಳೆ ಮಣ್ಣಿನ ರಸ್ತೆಗಿಳಿದ ಕಾರು ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಘಟನೆ ತಡರಾತ್ರಿ

“ಯಾರಿಗೂ ಹೇಳ್ಬೇಡಿ” ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ : ಕೋಟ ಶ್ರೀನಿವಾಸ್ ಪೂಜಾರಿ

ಕುಂದಾಪುರ: ನಳಿನ್ ಕುಮಾರ್ ಕಟೀಲ್ ಒಬ್ಬ ಸೂಕ್ಷ್ಮ ಜೀವಿ. ಅವರದ್ದು ಎನ್ನಲಾದ ಧ್ವನಿ ಸುರುಳಿ ಅವರದ್ದಲ್ಲ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾಳವಾರ ಪಂಚಾಯತ್ ನ ಕಾರ್ಯಕ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನನಗೆ ಆ ಆಡಿಯೋದ ಮೇಲೆ ಸಂಶಯ ಇದೆ. ಅದರಲ್ಲಿ ಇರುವ ಧ್ವನಿ ಭಾಜಪ ದ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದಲ್ಲ. ಇದರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್