Home Archive by category ಕರಾವಳಿ (Page 868)

ಆಲಂಪುರಿ ರಸ್ತೆ ಬದಿಯ ಗುಡ್ಡ ಕುಸಿತ: ಅಡಿಕೆ ಮರಗಳು ಧರಶಾಹಿ

ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ ೫೦ಕ್ಕೂ ಅಧಿಕ ಅಡಿಕೆ ಮರಗಳು ಧರಶಾಹಿಯಾಗಿದೆ. ಬಿ.ಸಿ. ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ

ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ ಸೇವಾ ನಿವೃತ್ತರಾಗಿರುವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕಾದ ಪ್ರೊ. ವಸಂತರಾಜ ಶೆಟ್ಟಿ ಉಪಸ್ಥಿತರಿದ್ದರು. ಡಾ. ಎಕ್ಕಾರು ಕರ್ನಾಟಕ ಸರಕಾರದ ಯುವ

ಕರಾವಳಿಯಲ್ಲಿ ಭಾರೀ ಮಳೆ: ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ

ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು. ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ

ಮಂಗಳೂರಿನಲ್ಲಿ ಮಳೆಯ ಅವಾಂತರ: ತಡೆಗೋಡೆ ಕುಸಿದು ದ್ವಿಚಕ್ರ ವಾಹನಗಳು ಜಖಂ

ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ. ಪ್ಲಾಟ್ ಬಳಿ ತಡೆಗೋಡೆ ಶಿಥಿಲವಾಗಿದ್ದು, ಸುರಿದ ಭಾರೀ ಮಳೆಯಿಂದ ಕುಸಿದಿದೆ. ಈ ವೇಳೆ ಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳ ಮೇಲೆ ಗೋಡೆಯ ಕಲ್ಲುಗಳು ಬಿದ್ದ ಹಿನ್ನೆಲೆಯಲ್ಲಿ ವಾಹನ ಗಳು ಜಖಂಗೊಂಡಿವೆ. ಇನ್ನು

ಪುತ್ತೂರಿನ ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

ಪುತ್ತೂರು:ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ. ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಚಲಿಸುವಂತಾಗಿದೆ.  

ವೀರಮಂಗಲದಲ್ಲಿ ರೈಲ್ವೇ ಹಳಿಗೆ ಧರೆ ಕುಸಿತ: ರೈಲು ಸಂಚಾರ ಸ್ಥಗಿತ

ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ.ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು

ಉಡುಪಿಯಲ್ಲಿ ಚಿನ್ನದ ಪದಕ ಪುರಸ್ಕೃತ ಸಿಬ್ಬಂದಿಗೆ ಸನ್ಮಾನ

ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ನಾಲ್ವರು ಸಿಬಂದಿಗಳಿಗೆ ಸನ್ಮಾನ ಕಾರ್ಯಕ್ರಮವು ಉಡುಪಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ದಳದ ಕಚೇರಿ ಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹೆಚ್.ಎಂ ವಸಂತ್ ಕುಮಾರ್, ಆಶ್ವಿನ್ ಸನಿಲ್, ಎಂ ಕೇಶವ್ ಹಾಗೂ ನೂತನ್ ಕುಮಾರ್ ಇವರುಗಳಿಗೆ ಇಲಾಖೆಯ ಸಿಬ್ಬಂದಿಗಳು ಗೌರವಯುತವಾಗಿ ಪೇಟಾ, ಶಾಲು ಹೊದಿಸಿ ಸನ್ಮಾನಿಸಿದರು.ಅಗ್ನಿ ಶಾಮಕ ಹಾಗು ತುರ್ತು ಸೇವಾ

ಉಡುಪಿಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಉಡುಪಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ.ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಮುಂದುವರೆದಿದ್ದು.ಜೀವ ನದಿಗಳು ತುಂಬಿ ಹರಿಯುತ್ತಿವೆ. ಉಡುಪಿ ನಗರದ ಮಠದಬೆಟ್ಟು ಪರಿಸರದಲ್ಲಿ ಇಂದ್ರಾಣಿ ನದಿ ತುಂಬಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಕೃಷಿ ಪ್ರದೇಶಗಳು ಭಾಗಶಃ ಮುಳುಗಡೆ ಗೊಂಡಿದ್ದು,ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಮಠದ ಬೆಟ್ಟು ಕೊಪ್ಪರ ತೋಟಕ್ಕೆ ಸಂಪರ್ಕಿಸುವ

ತೆಂಕ ಎರ್ಮಾಳಿನಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮೂವರಿಗೆ ಗಾಯ

ಎರಡು ಕಾರು ಹಾಗೂ ಅಟೋ ರಿಕ್ಷಾ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಪಡುಬಿದ್ರಿಯತ್ತ ಚಲಿಸುತ್ತಿದ್ದ ಆಟೋ ರಿಕ್ಷಕ್ಕೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಫೊರ್ಡ್ ಕಾರು ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾ ಕಮರಿಗೆ ಉರುಳಿದೆ. ಈ ಸಂದರ್ಭ ಅದೇ ರಸ್ತೆಯಾಗಿ

ಪಂಪ್‌ ವೆಲ್‌ ನೆರೆ ಮಾಧ್ಯಮ ಸೃಷ್ಟಿ : ನಳಿನ್ ಅಧ್ಯಕ್ಷತೆ ಸಭೆಯಲ್ಲಿ ಇಂಜಿನಿಯರ್ ಹೇಳಿಕೆ

 ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ