ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು,
ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ
ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ನು ಲ್ಯಾಂಡ್ ಲಿಂಕ್‌ನ ಲೇಹೌಟ್‌ನಲ್ಲಿರುವ ಸಣ್ಣ ಉದ್ಯವನ ಹಾಗೂ ಡ್ರೈನೇಜ್ ಸಮಸ್ಯೆ ಮೇಯರ್ ಅವರು ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಮೇಯರ್ , ಪಾಲಿಕೆಯ ವಿಶೇಷ ಅನುದಾನ ಮುಖಾಂತರ ಪಾರ್ಕ್‌ನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಾಂಡ್ ಲಿಂಕ್ಸ್ ನಲ್ಲಿರುವ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಕರಾವಳಿಯ ಪ್ರಸಿದ್ಧ ಕ್ಷೇತ್ರ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರಕ್ಕೆ ನೂತನ ವ್ಯವಸ್ಥಾಪನ ಸಮಿತಿಯ ರಚನೆಯಾಗಿದೆ. ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ.ಜೆ.ಶೆಟ್ಟಿ ಆಯ್ಕೆಗೊಂಡರೆ, ಸದಸ್ಯರಾಗಿ ರಾಘವೇಂದ್ರ ಅಡಿಗ, ಕೆ.ದೇವದಾಸ್ ಕುಮಾರ್, ಎಚ್.ಕುಸುಮಾ ದೇವಾಡಿಗ, ಎನ್.ನಿವೇದಿತ ಶೆಟ್ಟಿ, ಕೆ.ರಾಜೇಶ್ , ಎಚ್.ಕೆ.ಪುರುಷೋತ್ತಮ ಜೋಗಿ, ಮನೋಹರ್ ಸುವರ್ಣ, ನಾರಾಯಣ್ ಕೋಟ್ಯಾನ್ ಬೋಳಾರ್ ಆಯ್ಕೆಯಾಗಿದ್ದಾರೆ. ಮೂರು ವರ್ಷದ ಅವಧಿಗೆ ವ್ಯವಸ್ಥಾಪನ
ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.
ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ. ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಪುತ್ತೂರು : ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತು ಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ. ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ
ಮಂಗಳೂರು: ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಡಿ ಭಾಗದಲ್ಲಿರುವ ದಕ್ಷಿಣ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ – ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


















