ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ
ಮಂಗಳೂರಿನ ಕದ್ರಿಯಲ್ಲಿ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ. ಈತ ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಕದ್ರಿಯ ಯುನಿಸೆಕ್ಸ್ ಸೆಲೂನ್‌ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಯುವತಿಯ ಮೈಗೆ ಕೈ ಹಾಕಿ ಕಿರುಕುಳ ನೀಡಿದ್ದ ದಾವೂದ್ ಆಕೆಗೆ ಹಲ್ಲೆ
ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಕಡಬ: ಶಾಲೆಗಳ ಗೋಡೆಗಳಲ್ಲಿ ವರ್ಣ ಚಿತ್ರಗಳು ಹೊಸದೇನಲ್ಲ. ಹೆಚ್ಚಿನ ಶಾಲೆಗಳಲ್ಲಿ ವರ್ಲಿ ಚಿತ್ರ ಸೇರಿದಂತೆ ವಿವಿಧ ಬಗೆಯ ವರ್ಣಾಲಂಕಾರಗಳನ್ನು ನಾವೆಲ್ಲರೂ ಕಂಡಿದ್ದೇವೆ. ಆದರೆ ಅದಕ್ಕೆಲ್ಲಾ ಭಿನ್ನವೆಂಬಂತೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕುಂತೂರು ಪದವು ಸರಕಾರಿ ಶಾಲೆಯ ಗೋಡೆಗಳೆಲ್ಲವೂ ದೇಶದ ವಿವಿಧ ರಾಜ್ಯಗಳ ಕಲೆ, ನೃತ್ಯ, ಜಾನಪದ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕಣ್ಮನ ಸೆಳೆಯುವ ವೈವಿಧ್ಯಮಯ ವರ್ಣ ಚಿತ್ತಾರಗಳಿಂದ ಕಂಗೊಳಿಸುತ್ತಿದೆ. ಈ ಬಗ್ಗೆ ಒಂದು
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ
ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಶೋಧ ಕಾರ್ಯದಲ್ಲಿ ಚಿನ್ನ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ದಿಢೀರನೇ ಎಸಿಬಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಇಂದು
ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ
ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,


















