ಬಂಟ್ವಾಳ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿಸದ ’ ಸಾರಿಗೆ ಸುರಕ್ಷಾ-ಐಸಿಯು ಬಸ್’ ಗೆ ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತಿವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ
ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ. ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ
ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,
ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ
ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್ ಅಧ್ಯಕ್ಷ ಸ್ಥಾನವನ್ನು ಮುಹಮ್ಮದ್ ನಲಪಾಡ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಅದರಂತೆ ಅಧಿಕಾರ ಹಸ್ತಾಂತರ ಮಾಡುವುದಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್
ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್
ಉಜಿರೆ : ರಾಷ್ಟ್ರ ಮಟ್ಟದ ಪ್ರಸಿದ್ಧ ‘ಇಂಡಿಯಾ ಟುಡೇ’ ನಿಯತಕಾಲಿಕೆಯು ಶೈಕ್ಷಣಿಕ ಕೋರ್ಸ್‍ಗಳ ನಿರ್ವಹಣಾ ಸಾಧನೆಯ ಅಂಶಗಳನ್ನು ಪರಿಗಣಿಸಿ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜು ದೇಶದ ಪ್ರತಿóಷ್ಠಿತ ನೂರು ಕಾಲೇಜುಗಳ ಪಟ್ಟಿಯಲ್ಲಿ ಉನ್ನತ ಶ್ರೇಯಾಂಕ ಪಡೆದು ಮನ್ನಣೆ ಗಳಿಸಿದೆ.ರಾಷ್ಟ್ರದ ಪದವಿ ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿನ ವಿವಿಧ ಕೋರ್ಸ್‍ಗಳ ನಿರ್ವಹಣೆ ಮತ್ತು ಸಾಧನೆಯನ್ನು ಮೌಲ್ಯಮಾಪನ ಮಾಡಲು
ಉಳ್ಳಾಲ: ಬಸ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಉಚ್ಚಿಲ ರಾ.ಹೆ 66ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (23) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ


















