ಕಾರ್ಕಳ: ರಾಜ್ಯ ವ್ಯಾಪ್ತಿ ಸುದ್ದಿಯಾಗಿರುವ ದೇಶದ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟನ್ನು ಹಾಕಿ ಸಂಕಷ್ಟಕ್ಕೆ ಸಿಲುಕಿರುವ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಸೈನಿಕರ ಬಗ್ಗೆ ಅವಹೇಳನಕಾರಿ ಪೋಸ್ಟ್‍ಗಳನ್ನು ಹಾಕಿದ್ದಾರೆ ಈ
ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.
ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ
ಬಂಟ್ವಾಳ: ರಾಜ್ಯದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೋವಿಡ್ ಕಾರಣಕ್ಕಾಗಿ ಸ್ಥಗಿತಗೊಂಡಿರುವ ಶಾಲೆಯನ್ನು ಪುನಾರಂಭಿಸಬೇಕು ಎಂದು ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸೋಮವಾರ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಪ್ರಕಾಶ್ ಅಂಚನ್ ಕೆಲ
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ನಡೆದಿದ್ದು, ಅಪೂರ್ಣ ಪೈಪ್‌ಲೈನ್ ಕಾಮಗಾರಿಯಿಂದಾಗಿ ಅಲ್ಲಲಿ ದೊಡ್ಡ ಹೊಂಡಗಳನ್ನು ತೋಡಿ ಮುಚ್ಚದೆ ಬಿಟ್ಟು ಅಪಾಯಕ್ಕೆ ಆಹ್ವಾನ ನೀಡಲಾಗಿದೆ. ಕಾಂಕ್ರೀಟ್ ರಸ್ತೆಗಳನ್ನು ತುಂಡರಿಸಿ ಪೈಪ್‌ಲೈನ್ ಹಾಕಿದ ಬಳಿಕ ರಸ್ತೆ ಪುನರ್ ನಿರ್ಮಿಸಿಕೊಡದೆ
ಪೆರ್ಮುದೆ ಗ್ರಾಮ ಪಂಚಾಯತ್ ಯ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಪಡುಪದವು ಮಾಧವ ಭಟ್ ರವರ ಮನೆ ಬಳಿ ಕೃಷಿ ಮೀನು ಗಾರ ದಿನಾಚರಣೆ ಮತ್ತು ಮಾಹಿತಿ ಕಾರ್ಯಗಾರವನ್ನು ಮುಲ್ಕಿ ಮೂಡಬಿದ್ರಿ ಶಾಸಕರಾದ ಉಮನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ಯಾದ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯ ಕ್ರಮದಲ್ಲಿ ಜಲಸಂರಕ್ಷಣೆಗಾಗಿ ಜನರಿಗೆ ನೀಡಲಾದ ಮನವಿಗೆ ಪೇರಿತರಾಗಿ ಸುಮಾರು ೫೦ಲಕ್ಷಕ್ಕೂ ಮೇಲ್ಪಟ್ಟು ಖರ್ಚಮಾಡಿ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.
ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್ ಅವರು ಇದು ನಾಲ್ಕನೇ ಬಾರಿ ಪುತ್ತೂರಿನೊಡೆಯ ಮಹಾಲಿಂಗೇಶ್ವರನ ದರ್ಶನ ಮಾಡಿರೋದಂತೆ. ’ತಮ್ಮ
ಪುತ್ತೂರು: ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೇ ಇಲಾಖೆಯು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸಂಚಾರ ವ್ಯವಸ್ಥೆಯಲ್ಲಿ ಪ್ರಯಾಣಿಕ ರೈಲುಗಳಿಗೆ ಅತ್ಯಾಧುನಿಕ ಮಾದರಿಯ ಹವಾ ನಿಯಂತ್ರಿಣ ವಿಸ್ಟಾ ಡೋಂ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕಬಕ ಪುತ್ತೂರು ಆದರ್ಶ ರೈಲು ನಿಲ್ದಾಣದಲ್ಲಿ ಎಸ್ಟಾ ಡೋಂ ಬೋಗಿಗಳನ್ನು ಅಳವಡಿಸಿದ
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು


















