Home Archive by category ಕರಾವಳಿ (Page 879)

ಮರವೂರು ಸೇತುವೆ ಕುಸಿತದಿಂದ ಕಂಗೆಟ್ಟ ಸ್ಥಳೀಯರು : ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ ದುರಸ್ತಿ ಕಾರ್ಯ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಬಗ್ಗೆ ಸ್ಪೆಷಲ್ ರಿಪೋರ್ಟ್. ಮರವೂರು ಸೇತುವೆ ಕುಸಿತವಾಗಿ

ಕೋಟಿ ಗಟ್ಟಲೆ ವೆಚ್ಚದಲ್ಲಿ ನಿರ್ಮಾಣಗೊಂಡು 3ವರ್ಷ ಕಳೆದರೂ, ಆರಂಭವಾಗಿಲ್ಲ ಉರ್ವ ಮಾರುಕಟ್ಟೆ

ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ ಮಾರ್ಕೇಟ್…..ಉದ್ಘಾಟನೆಗೊಂಡ ಬಳಿಕ ಮಳಿಗೆಗಳನ್ನು ಏಲಂ ಮಾಡದೇ ಬಿಕೋ ಎನ್ನುತ್ತಿರುವ ಕಟ್ಟಡ….. ಹೌದು ಮಂಗಳೂರು

ಕಾರ್ಮಿಕರಿಗೆ ನೀಡಲಾದ ಆಹಾರ ಕಿಟ್ ವಿತರಣೆಯಲ್ಲಿ ಅವ್ಯವಹಾರ- ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಸಿಐಟಿಯು ಪ್ರತಿಭಟನೆ

ಉಡುಪಿ: ಕಾರ್ಮಿಕರ ಹೆಸರಲ್ಲಿ ನೀಡಲಾದ ಆಹಾರ ಕಿಟ್ ಅವ್ಯವಹಾರ ತನಿಖೆಗೆ ಅಗ್ರಹಿಸಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿದರು. ಕೊವಿಡ್ ಸಂಕಷ್ಟ ಕಾಲದಲ್ಲಿ ಕಾರ್ಮಿಕರ ಹೆಸರಲ್ಲಿ ಬಿಡುಗಡೆಗೊಂಡ ಆಹಾರ ಕಿಟ್ ಖರೀದಿಯಲ್ಲಿ ಭಾರೀ ನಡೆದಿರುವ ಅವ್ಯಹಾರ ತನಿಖೆ ನಡೆಸುವ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಉಡುಪಿ ತಾಲೂಕು ಕಚೇರಿ ಎದುರುಗಡೆ ಸಿಐಟಿಯು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ

ಕಾಡಬೆಟ್ಟು-ಪಿಲಿಂಗಾಲು ಸಂಪರ್ಕ ರಸ್ತೆ ಕೆಸರುಮಯ ಸಂಚಾರಕ್ಕೆ ತೊಡಕು

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಯಾಗಿದೆ.ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ ಧೂಳು ತುಂಬಿಕೊಂಡರೆ ಮಳೆಗಾಲದಲ್ಲಿ ಕೆಸರುಮಯಗೊಂಡು ಪಾದಚಾರಿಗಳಿಗೆ ನಡೆದಾಡಲು ಕೂಡ ಅಸಾಧ್ಯವಾಗಿದೆ. ಇದೇ ಪರಿಸರದಲ್ಲಿ ಕಾರಣಿಕ ಪ್ರಸಿದ್ಧ ಗಾಯತ್ರಿ ದೇವಿ ದೇವಸ್ಥಾನವೂ ಇದೆ. ವಗ್ಗ

ಕಡಬ: ಇಲಿ ಜ್ವರಕ್ಕೆ ಯುವಕ ಬಲಿ

ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ.  ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ

ಜನರಿಗೆ ಆತಂಕ ಮೂಡಿಸುವ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ: ಕುಂದಾಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,

 ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ: ಮನೆ ಭಾಗಶಃ ಹಾನಿ

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.ಜಯಂತಿ ಮಕ್ಕಳ ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ವೇಳೆ ಸಂಭವಿಸಿದ ಭಾರೀ ಸಿಡಿಲು ಅವರ ಮನೆಗೆ ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು

ಜುಲೈ 9 ರಂದು  ಸಾಗರ ಮಾಲಾ ಯೋಜನೆಯ ವಿರುದ್ದ ಮೀನುಗಾರರಿಂದ ‘ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ‌ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ

ಮಂಗಳೂರಿನ ಹಂಪನಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ವಿರುದ್ಧ CPIM ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು