Home Archive by category ಕರಾವಳಿ (Page 880)

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ

ಪುತ್ತೂರಿನ ಬಹುಮುಖ ಸಾಧಕ ವಿದ್ವಾನ್ ಮಂಜುನಾಥ್‌ಗೆ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣಪತ್ರ

ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ

ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಗೆ ಹಾನಿ: ದೂರು ದಾಖಲು

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಾಸ್ತಾವಿಕ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಮಾಜಿ ಹೋರಾಟಗಾರರಾದ ಎಸ್.ಆರ್.ಹೀರೇಮಠ್, ಮಾಜಿ ಸಚಿವರಾದ ಶಶಿಕಾಂತ್ ನಾಯಕ್,

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ