ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ
ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ 65 ಗ್ರಾಂ ತೂಕದ 3.90 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ‘ಎಂಡಿಎಂಎ’ನ್ನು ಖರೀದಿಸಿ ಸ್ವಿಫ್ಟ್
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೆಂಟ್ ಲೈನ್ ಕೊರೋನಾ ವಾರಿಯರ್ಸ್ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ ಮಾಸ್ಕ್,ಛತ್ರಿ,ಸ್ಯಾನಿಟೈಸರ್ ಸೇರಿದಂತೆ ಸುಮಾರು25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಕೊರೊನಾ
ಕಾರ್ಕಳ : ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಜನರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಿರುವ ಪತ್ರಕರ್ತರು ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿದ್ದು, ಮಾಧ್ಯಮದ ಮಂದಿಯೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೂ ಸೂಕ್ತ ಸೌಲಭ್ಯ, ಸಹಕಾರ ಕಲ್ಪಿಸುವುದು ಅನಿವಾರ್ಯವಾಗಿದೆ” ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ಅವರು, ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ
ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ 1೦೦ ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಅವರು ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರುವ ನಡುವೆಯೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ
ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣುಮಕ್ಕಳು ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಮಗು ಪೂರ್ವಿಕ.. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ.ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ ಮಡಿಲಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮಗಳ ಮುಂದಿನ ಭವಿಷ್ಯಕ್ಕಾಗಿ ಈಗ ಆಸರೆ ಯಾಗಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪರಿಕಲ್ಪನೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ಸ್ಥಾಪಿಸಲಾದ “ಬಂಟ್ವಾಳ ಬಿಜೆಪಿ ಕ್ಷೇಮ ನಿಧಿ”
ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ
ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ
ದೇಶದಲ್ಲಿ ವ್ಯಾಪಕವಾಗಿ 100ರ ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ ಶನಿವಾರ ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ


















