ಈ ಬಾರಿಯ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ಕಿರಣ್ ರೆಡ್ಡಿ ಮತ್ತು ಚಿರಾಗ್ ಶೆಟ್ಟಿಯವರಿಗೆ ನೀಡಲಾಗಿದೆ. ಇದೇ ವೇಳೆ 26 ಮಂದಿ ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಜಮ್ಮು ಕಾಶ್ಮೀರದ ಶೀತಲ್ ದೇವಿ ಕಾಲಿನಿಂದಲೇ ಬಿಲ್ಲೆಳೆದು ಬಾಣ ಬಿಟ್ಟು ಅಂತರರಾಷ್ಟ್ರೀಯ ಸಾಧನೆ ಮಾಡಿದವರು. ಅವರ ಜೊತೆಗೆ
ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್
ಕಥೋಲಿಕ್ ಸಭಾ ಮಂಗಳೂರು ಪ್ರದೇಶ, ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿ.10 ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಂಜೆಲೊರ್ ಚರ್ಚ್‍ನ ಅಂತರ್ ಧರ್ಮೀಯ ಆಯೋಗದ ಸಂಚಾಲಕರಾಧ ಫೆಲಿಕ್ಸ್ ಮೊರಾಸ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.
ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ
ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕ ಪಡೆದ ಮಣಿಕಂಠ ಹೋಬಳಿದಾರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಬಿಜೆಪಿ
ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ, ಮಧ್ಯ ಪ್ರದೇಶದ ದೇವಾಸ್ ನಲ್ಲಿ ನಡೆಸಿದ 17ರ ವಯೋಮಿತಿಯ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್ ಪಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ SGFI ಗೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನ್ನೈತ್ತೂರು ಸುರೇಶ ಮತ್ತು
ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು. 6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿಯುವರಾಜ್ ಡಿ ಕುಂಡರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.