Home Archive by category ರಾಜಕೀಯ

ಮಂಗಳೂರು : ಬಾಯಿ ಕ್ಯಾನ್ಸರ್ ಮಾಹಿತಿ ಶಿಬಿರ ಮತ್ತು ತಪಾಸಣಾ ಶಿಬಿರ

ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು

ಫೆ.6ರಂದು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ

ಸುಳ್ಯ: ಕೆಳ ಮತ್ತು ಮಧ್ಯಮ ವರ್ಗಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ – ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ ಸದಾಶಿವ

ಕೆಳ ಮತ್ತು ಮಧ್ಯಮ ವರ್ಗದ ಜನರ ಏಳಿಗೆಯ ದೃಷ್ಠಿಯಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಟಲ್ ಟಿಂಕರ್ ಲ್ಯಾಬ್‌ಗಳನ್ನು ಶಾಲೆಗಳಿಗೆ ವಿಸ್ತರಿಸಿರುವುದು, ಆದಾಯ ತೆರಿಗೆ ಪಾವತಿಯ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿರುವುದು, ಕಿಸಾನ್ ಕೆಡಿಟ್‌ನ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಜೊತೆಗೆ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸೆಂಟರ್‌ಗಳನ್ನು ತೆರೆಯುವುದಲ್ಲದೆ ಜೀವರಕ್ಷಕ ಔಷಧಗಳಿಗೆ ಜಿಎಸ್‌ಟಿಯಿಂದ

ಕೇಂದ್ರದ ಬಜೆಟ್ -ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ : ರಕ್ಷಿತ್ ಶಿವರಾಂ

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ

ಮಂಗಳೂರಿನಲ್ಲಿ ಉಪರಾಷ್ಟ್ರಪತಿ ಜಗದೀಶ್ ಧನ್ ಕರ್

ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣಕ್ಕೆ ಮನವಿ

ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ

ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಕೆ : ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್

ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ್ದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅಲ್ಲದೇ, ಅದ್ದು

ದಿಲ್ಲಿ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದ ಆಮ್ ಆದ್ಮಿ ಪಕ್ಷ, ಯಾವುದೇ

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ

ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

 ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ