Home Archive by category ರಾಜಕೀಯ (Page 14)

ಅಭಿವೃದ್ಧಿ ಕಾರ್ಯಕ್ಕೆ ಜನರು ಒಲವು ತೋರಿ ಗೆಲುವು ತಂದುಕೊಟ್ಟಿದ್ದಾರೆ : ರಾಜೇಶ್ ನಾಯ್ಕ್

ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ

ಗೆಲುವಿಗೆ ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ : ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ ಗಂಟೆ ಹೊಳೆಯವರು ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು ನಾವು ಕಾಣದೆ ಇರುವ

ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ

ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಮತ ಚಲಾಯಿಸಿದ ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತದಾನ 

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಂದ ಮತದಾನ

ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ

ರಾಜ್ಯಾದ್ಯಂತ ಮತದಾನ ಪ್ರಾರಂಭ

 ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ ಬಾರಿಯ ಮಾದರಿ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಸೆಳೆಯುವಂತಿದೆ. ಇನ್ನು ರಾಜ್ಯದ ಒಟ್ಟು

ಕರ್ನಾಟಕಕ್ಕೆ ಡಬಲ್ ಎಂಜಿನ್‍ನ ಅಗತ್ಯವೇ ಇಲ್ಲ : ಮಂಗಳೂರಿನಲ್ಲಿ ಎಮ್‍ಎಲ್‍ಸಿ ಮಂಜುನಾಥ ಭಂಡಾರಿ ಹೇಳಿಕೆ

ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನಿಸಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ