Home Archive by category ರಾಜ್ಯ (Page 26)

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ,

ದ.ಕ. ಜಿಲ್ಲೆಯಲ್ಲಿ ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ಮಂಗಳೂರು: ರಾಜ್ಯದಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ನಾಲ್ಕು ತಂಡಗಳ ನೇತೃತ್ವದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಪ್ರವೇಶಿಸಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದೆ. ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡವು ಮುನ್ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾ.11-13ರವರೆಗೆ ದ.ಕ.ಜಿಲ್ಲೆಯಲ್ಲಿದ್ದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ

ಕನ್ನಡ ಸಾಹಿತ್ಯಕ್ಕೆ ಖಿದ್ಮಾ ಸೇವೆ ಅಪಾರ: ಡಾ: ಬಸವರಾಜ್ ಪೂಜಾರ

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 4ನೇ ವಾರ್ಷಿಕೋತ್ಸವದ ಅಂಗವಾಗಿ ಧಾರವಾಡದ ರಂಗಾಯಣದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಖಿದ್ಮಾ ಕವಿ-ಕಾವ್ಯ ಸಂಗಮದ ಸರ್ವಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ: ಬಸವರಾಜ್ ಪೂಜಾರ ಕನ್ನಡ ಸಾಹಿತ್ಯ ಶ್ರೀಮಂತ ಗೊಳ್ಳುವುದರ ಹಿಂದೆ ಬಹಳಷ್ಟು ಸಂಘಟನೆಗಳ ಅವಿರತಶ್ರಮವಿದೆ. ಅದರಲ್ಲೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಮಾಡಿರುವಂತಹ ಸೇವೆ ಅಪಾರವಾದದ್ದು ಇನ್ನಿತರ

ವಿಧಾನಸಭಾ ಚುನಾವಣೆಗೆ ಯುವ ಕಾಂಗ್ರೆಸ್ ನಿಂದ ತಯಾರಿ

ಬೆಂಗಳೂರು, ಮಾ, 3; ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ” ಆರಂಭಗೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಾತ್ರ, ಚುನಾವಣಾ ಪ್ರಚಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಟ್ಟು ಪರಿಣಾಮಕಾರಿಯಾಗಿ ಹೋರಾಟ ನಡೆಸುವ ಮತ್ತು ನಿರುದ್ಯೋಗ, ಇತರೆ ಯುವ ಜನಾಂಗ ಎದುರಿಸುತ್ತಿರುವ ಗಂಭೀರ

ರಾಜ್ಯ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ಸವಾಕ್ ಒತ್ತಾಯ

ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್‌ ಆಫ್‌ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು ಅದಕ್ಕೆ ಸಂಬಂಧಿಸಿದಂತೆ ಕಲಾವಿದರೂ ಇದ್ದಾರೆ. ಇವರೆಲ್ಲ ಸಂರಕ್ಷಣೆಯನ್ನು ಸರಕಾರ ಮಾಡಬೇಕಾಗಿದೆ.

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ಸೇವೆ ಬಂದ್

ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ; ಏನೇ ಕ್ರಮ ಕೈಗೊಂಡರೂ ಎದುರಿಸಲು ಸಿದ್ಧ. ಆಯೋಗ ವರದಿ ಜಾರಿಯಾದರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು. ಒಂದುವೇಳೆ ಎಸ್ಮಾ

ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಗಾಗಿ ಹಣ ಮೀಸಲಿಟ್ಟಿದ್ದೇವೆ : ಸಿಎಂ ಬೊಮ್ಮಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್‌ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನ ಮಾಡುತ್ತೇವೆ” ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಜಾರಿಗೆ

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾಗೊಳಿಸಿ ; ರಾಜ್ಯಪಾಲರಿಗೆ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ‌ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜೀವ

ತಿರುಪತಿ ಕ್ಷೇತ್ರದ ಭಕ್ತಿ ವಾಹಿನಿಯ ನಿರ್ದೇಶಕರಾಗಿ ಡಾ.ವಸಂತ ಕವಿತಾ ನೇಮಕ

ತಿರುಪತಿ ಕ್ಷೇತ್ರದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿ ಡಾ.ವಸಂತ ಕವಿತ ಅವರು ನೇಮಕಗೊಂಡಿದ್ದಾರೆ.ತಿರುಪತಿ ಕ್ಷೇತ್ರದ ಭಕ್ತಿ ಚಾನೆಲ್ ಗೆ ವಸಂತ ಕವಿತಾ ಸೇರಿದಂತೆ ನಾಲ್ಕು ಮಂದಿ ಹೊಸ ನಿರ್ದೇಶಕರ ನೇಮಕಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ‌ಅನುಮೋದನೆ ನೀಡಿದೆ.ಬೆಂಗಳೂರಿನವರಾಗಿರುವ ಶ್ರೀಮತಿ ವಸಂತ ಕವಿತಾ ಅವರು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೊಮ್ಮಗಳು . ವಸಂತ ಕವಿತಾ ಅವರು ಅನೇಕ