ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ವಿಧಾನಸಭೆ-
ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ
ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್
ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ ಅಸೋಸಿಯೇಷನ್ ಕಾರ್ಯಕಾರಿಣಿ ಸಮಿತಿ ಸಭೆಯು ಮೈಸೂರು ನಗರದ ಹಾರ್ಡಿಂಜ್ ಸರ್ಕಲ್ ಬಳಿ ಇರುವ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯಲ್ಲಿ ಹಿಂದಿನ ನಡಾವಳಿಗಳನ್ನು ಅಂಗಿಕರಿಸಲಾಗಿ,ಸಂಘಕ್ಕೆ ತಮ್ಮದೇ ನಿವೇಶನವನ್ನು ಕೊಂಡುಕೊಳ್ಳಲು ಪ್ರಸ್ತಾಪಿಸಲಾಯ್ತು. ಸಂಘದ ಅಧ್ಯಕ್ಷರಾದ ಬಿ.ಚೆನ್ನರೆಡ್ಡಿಯವರು ಮಾತನಾಡಿ, ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಸಮಸ್ಯೆಯನ್ನು ಕಂಡಿದ್ದೇವೆ. ಇನ್ನು ಫೈನಾನ್ಸ್ ನಲ್ಲಿ ಸಾಲ ಮಾಡಿ
ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,