Home Archive by category ರಾಜ್ಯ (Page 34)

ರಾಜ್ಯದ 16ನೇ ವಿಧಾನಸಭೆ ಅಧಿವೇಶನ – ಕರಾವಳಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ

ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ

ಸಕಲೇಶಪುರ : ಬೆಳ್ಳಂಬೆಳಗ್ಗೆ ಕೊಲ್ಲಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ

ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ ಪಡುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ಪ್ರದೇಶದಲ್ಲಿ ಎರಡು ಜನರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ಹೋಗಲು ಕೆಲಸಗಾರರು ಭಯ ಪಡುವಂತಾಗಿದೆ.

ಕೇರಳ : ಲಾಟರಿಯಲ್ಲಿ 70 ಲಕ್ಷ ಬಂಪರ್ ಬಹುಮಾನ- ಪತ್ತೆಯಾಗದ ಟಿಕೆಟ್ ಅದೃಷ್ಟಶಾಲಿ

ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಬಂಪರ್ ಬಹುಮಾನ ಬಂದ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಈ

ಸಿಎಂ ಆಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ

ಸಕಲೇಶಪುರ : ಶಾಸಕ ಸಿಮೆಂಟ್ ಮಂಜುಗೆ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ

ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.

ರಾಜ್ಯದಲ್ಲಿ ಬಹತೇಕ ಶಾಂತಿಯುತವಾಗಿ ನಡೆದ ಮತದಾನ : ಇವಿಎಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.75.87 ಮತದಾನ ದಾಖಲಾಗಿದ್ದು ಅಭ್ಯರ್ಥಿಗಳ

ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ

ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.

ಸಕಲೇಶಪುರ : 99 ವರ್ಷದ ವೃದ್ಧೆ ಸಿದ್ದಮ್ಮ ನಡೆದು ಕೊಂಡು ಬಂದು ಮತದಾನ

ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಇಂದು 90 ವರ್ಷ ಮೇಲ್ಪಟ್ಟ ವೃದ್ದೆಯರು ಮತದಾನ ಮಾಡಿದರು.ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಹಸಗವಳ್ಳಿಯ ರಂಗನಾಥ ಪ್ರೌಡಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ 99 ವರ್ಷದ ವೃದ್ಧೆ ಸಿದ್ದಮ್ಮ ನೆಡೆದು ಕೊಂಡು ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು. ಯಸಳೂರು ಹೋಬಳಿಯ ಚಂಗಡಹಳ್ಳಇ ಪಂಚಾಯತಿ ವ್ಯಾಪ್ತಿಯ ಬಸ್ಕಲ್ ಗ್ರಾಮದ 99 ವರ್ಷದ ವಯೋವೃದ್ಧ ಬಿಳಿಗಮ್ಮ ಮತ ಚಲಾವಣೆ ಮಾಡಿದ್ದು ವಿಶೇಷವಾಗಿತ್ತು.ಹಾಗೆ 97