ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ; ಏನೇ ಕ್ರಮ ಕೈಗೊಂಡರೂ ಎದುರಿಸಲು
7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್‌ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನ ಮಾಡುತ್ತೇವೆ” ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಜಾರಿಗೆ
ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜೀವ
ತಿರುಪತಿ ಕ್ಷೇತ್ರದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿ ಡಾ.ವಸಂತ ಕವಿತ ಅವರು ನೇಮಕಗೊಂಡಿದ್ದಾರೆ.ತಿರುಪತಿ ಕ್ಷೇತ್ರದ ಭಕ್ತಿ ಚಾನೆಲ್ ಗೆ ವಸಂತ ಕವಿತಾ ಸೇರಿದಂತೆ ನಾಲ್ಕು ಮಂದಿ ಹೊಸ ನಿರ್ದೇಶಕರ ನೇಮಕಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅನುಮೋದನೆ ನೀಡಿದೆ.ಬೆಂಗಳೂರಿನವರಾಗಿರುವ ಶ್ರೀಮತಿ ವಸಂತ ಕವಿತಾ ಅವರು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೊಮ್ಮಗಳು . ವಸಂತ ಕವಿತಾ ಅವರು ಅನೇಕ
ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ
ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ
ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜೆಪಿ ನಡ್ದಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ
ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿಯವರು ತಮ್ಮ ಅಧಿಕಾರವಧಿಯಲ್ಲಿ ಎರಡನೇ ಬಾರಿಗೆ ಇಂದು ಸದನದಲ್ಲಿ ಮಂಡಿಸಿದ ಆಯವ್ಯಯವು ರಾಜ್ಯದ ಯುವಜನರ ಬದುಕಿನ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ. ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ನಿರುದ್ಯೋಗಿ ಯುವಕರಿಗೆ ಈ ಬಜೆಟ್ ನಿರಾಸೆ ಮೂಡಿಸಿದೆ. ಯುವಜನರ ಬದುಕಿಗೆ ಭದ್ರತೆ ನೀಡದ ಈ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ