ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ತೋರಿಸಿದರು ಕೂಡ ಈಡೇರಿಸಿದೆ ಇರುವುದು 3. ಓಲಾ ಉಬರ್ ನಂತಹ ಮಹಾ ವಂಚಕ
ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ
ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಅಮೃತ ಕಾಲಕ್ಕೆ ಪ್ರವೇಶಿಸಿದ್ದು, ಇಂತಹ ಸಂದರ್ಭದಲ್ಲಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು
ಬೆಂಗಳೂರು, ಜ, 27; ಬಲಿಜ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್. ಸೀತಾರಾಂ ಒತ್ತಾಯಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಬೃಹತ್ “ಬಲಿಜ ಸಂಕಲ್ಪ ಸಭೆ”ಯಲ್ಲಿ ಬಲಿಜ ಸಮುದಾಯದ ಹಕ್ಕೊತ್ತಾಯಗಳನ್ನು ಬೆಂಬಲಿಸಿ ಮಾತನಾಡಿದ ಅವರು, ಬಲಿಜ ಸಮುದಾಯಕ್ಕೆ 2ಎ ಪ್ರವರ್ಗದಡಿ ಶಿಕ್ಷಣದಲ್ಲಿ ಮಾತ್ರ ಮೀಸಲಾತಿ ಸೌಲಭ್ಯವಿದ್ದು, ಸರ್ಕಾರಿ
ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ತುಲು ಲಿಪಿ ನಾಮಫಲಕ ಅನಾವರಣ ಮಾಡಲಾಯಿತು. ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಪುಂಡೂರು ಪುರುಷೋತ್ತಮ ಪುಣಿಂಚತ್ತಾಯ ನಿವೃತ್ತ ಉಪನ್ಯಾಸಕ, ಮೃದಂಗ ವಾದಕರು
ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ ಬಿಡುಗಡೆ ಹಾಗೂ ಅಂಧರಿಗೆ ಕೈಗಡಿಯಾರ ಮತ್ತು ವಾಕಿಂಗ್ ಸ್ಟಿಕ್ ವಿತರಿಸಿದರು. ಪೋಷಕ ಕಲಾವಿದರಿಗೆ
ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ
ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಂತರು, ಧಾರ್ಮಿಕ ಚಿಂತಕರು, ವೈದ್ಯಕೀಯ ವಲಯದ ತಜ್ಞರ ಚಿಂತನ – ಮಂಥನ: ಕೆ.ಆರ್. ನಗರದ ಯಡತೊರೆ ಮಠದ ಮಾರ್ಗದರ್ಶನದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ಬೆಂಗಳೂರು, ಜ, 17; ಜಗದ್ಗುರು ಶಂಕರಾಚಾರ್ಯ ದಕ್ಷಿಣಾಂನಯ ಶೃಂಗೇರಿ ಶಾರಾದಾ ಪೀಠದ ಆಶೀರ್ವಾದದೊಂದಿಗೆ ಮೈಸೂರಿನ ಕೆ.ಆರ್. ನಗರದ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತಿ ಸ್ವಾಮೀಜಿ ಅವರ