ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ
ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ
ಬೆಳಗಾವಿ: ಎರಡು ದಿನದ ಹಸುಗೂಸನ್ನು ಬಾಸ್ಕೆಟ್ನಲ್ಲಿ ಹಾಕಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಕೆಎಲ್‌ಇ ಸ್ಕೂಲ್ ಬಳಿ ನಡೆದಿದೆ. ಕೇವಲ 2 ದಿನದ ಹಸುಗೂಸನ್ನು ಗುಂಡಿಯಲ್ಲಿ ಬಿಸಾಡಿ ಹೋಗಿದ್ದಾರೆ. ಸದ್ಯ ರಸ್ತೆ ಪಕ್ಕದ ಗುಂಡಿಯಲ್ಲಿದ್ದ ಮಗುವನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ ಅತಿ ಎತ್ತರವಾದ ಹಾಗೂ 5400 ಕೆ.ಜಿ. ತೂಕ ಹೊಂದಿದ್ದ ಗೋಪಾಲಸ್ವಾಮಿ ಆನೆಯು ಅಭಿಮನ್ಯುವಿನ ನಂತರ ದಸರಾ
ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು.ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು ಬಸನಗೌಡ ಪಾಟೀಲ. ಸೋಮಶೇಖರಗೌಡ ಚಿರದಿನ್ನಿ, ದೇವೇಂದ್ರ ಹೆಳವರ, ಪರಸು ಹೆಳವರ ಇಸ್ಮೈಲ್ ಹಳೆಮನಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,
ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ ಎಂದು ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳ ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಧಿಕಾರಿ ಮತ್ತು ನಿರ್ದೇಶಕರಾದ ಪಿ.ರಮೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮುಖ್ಯ
ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 5000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸ