Home Archive by category ರಾಜ್ಯ (Page 58)

ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ.

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್

ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ಬೇಲೂರಿನಲ್ಲಿ ಹೆಚ್ಚುತ್ತಿರುವ ಮತಾಂತರ ಚಟುವಟಿಕೆ

ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ

ಮಂಡ್ಯದಲ್ಲಿ ದಿನೇಶ್ ಗೂಳಿ ಗೌಡ ಪರ ಪ್ರಚಾರದ ಅಖಾಡಕ್ಕಿಳಿದ ಯುವ ಕಾಂಗ್ರೆಸ್

ನಾಗಮಂಗಲ, ನ 25; ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ದಿನೇಶ್ ಗೂಳಿ ಗೌಡ ಪರ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಚಾರದ ಅಖಾಡಕ್ಕೆ ಇಳಿದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಸಭೆಯಲ್ಲಿ ಮಾತನಾಡಿ,

ನಟಿ ಕಂಗನಾ ರಣಾವತ್ ಹಾಗೂ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ದೂರು ದಾಖಲಿಸಿದ ಕೆಪಿವೈಸಿಸಿ

ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ ಅವಹೇಳನಕಾರಿಯಾಗಿ ಟೀಕೆ ಮಾಡಿರುವ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ಪ್ರಕರಣದಡಿ

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ

ಪ್ರಿಯಕರನಿಂದಲೇ ತಂದೆಯನ್ನುಕೊಲ್ಲಿಸಿದ ಪುತ್ರಿ

ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ.ಯಲಹಂಕ ನ್ಯೂ ಟೌನ್‌ನ ಅಟ್ಟೂರು ಬಡಾವಣೆ ನಿವಾಸಿ ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಬಿಹಾರ ಮೂಲದ ಇವರು ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳು

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

  ಬೆಂಗಳೂರು: ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಗೆ ಡಿಸೆಂಬರ್ 12 ರಂದು ನಡೆಯಲಿರುವ ಚುನಾವಣೆಗೆ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ ನೇತೃತ್ವದ ತಂಡ ಸಜ್ಜಾಗಿದ್ದು, ಸಂಘದ ಗತ ವೈಭವವನ್ನು ಮತ್ತೆ ಮರಳಿ ತರಲು ಕಾರ್ಯೋನ್ಮುಖವಾಗಿದೆ.   2021 – 26 ರ ಅವಧಿಗೆ ನಡೆಯಲಿರುವ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ. ಕೆಂಚಪ್ಪಗೌಡ, 2008 –13 ರ ಸಾಲಿನಲ್ಲಿ ನಮ್ಮ ತಂಡ ಅಭಿವೃದ್ಧಿ ಪರ್ಷಕ್ಕೆ ಚಾಲನೆ ನೀಡಿತ್ತು. ಈ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಭೇಟಿ: ಗಿಡ ನೆಟ್ಟು ಪರಿಸರ ಜಾಗೃತಿ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ ಆಧುನಿಕ ಯುಗದಲ್ಲಿ ಕಾಡು ಉಳಿಸುವಂತಹದ್ದು ಸವಾಲಾಗಿದೆ. ಅರಣ್ಯವನ್ನು ಹತ್ತಿರದಿಂದ ನೋಡುವಂತಹ ಸೌಭಾಗ್ಯವನ್ನು ಅರಣ್ಯ ವಿಹಾರ ಸಂಸ್ಥೆ ನಮ್ಮೆಲ್ಲರಿಗೆ ನಮ್ಮ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರ ನೇತೃತ್ವದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಸಂಸ್ಥೆಯ