ಬೆಂಗಳೂರು: ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು
ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಬಾಣಾವರ ಸಮೀಪದ ಸರ್ವೆ ಕೊಪ್ಪಲು ಮೂಲದವರಾಗಿದ್ದು ಆರ್.ಟಿ.ಓ ಅಧಿಕಾರಿಗಳ ತಪಾಸಣೆಯ ವೇಳೆ ಹದಿನೇಳು ಸಾವಿರ ದಂಡವಿಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೊರೋನಾ ಹಿನ್ನೆಲೆಯಲ್ಲಿ ವಾಹನ
ಬೆಂಗಳೂರು, ಆ 31; ಕೋವಿಡ್ ಸಂಕಷ್ಟದಿಂದ ಜನತೆ ಹೊರ ಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಗೌರಿ – ಗಣೇಶ ಹಬ್ಬಕ್ಕಾಗಿ ವಿಶೇಷವಾಗಿ ಯಲಹಂಕದ ಜಕ್ಕೂರಿನ ಮಧುರ ಮಿಲನ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 3 ರಿಂದ 5 ರ ವರೆಗೆ ಮಹಿಳೆಯರಿಂದಲೇ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬಕ್ಕೆ ಹೊಳಪು ಮತ್ತು ಮೆರಗು ನೀಡಲು ಮಹಿಳೆಯರಿಂದಲೇ ವಿಶೇಷ ಆಭರಣ ಮೇಳ
ಬೆಂಗಳೂರು: ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಭಾವಿ ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್ ಹಾಗೂ ಹರ್ಯಾಣ ಮೂಲದ ಉತ್ಸವ್ ಮೃತಪಟ್ಟವರು
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ್ ಅವರ ಜತೆ
ಬೆಂಗಳೂರು: ಅತ್ಯಾಧುನಿಕ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ದೃಷ್ಟಿದೋಷಗಳಿಗೆ ಅತ್ಯಂತ ನಿಖರವಾಗಿ ಪರಿಹಾರ ಒದಗಿಸುವ ಜಮಿಂದಾರ್ ಮೈಕ್ರೋಸರ್ಜಿಕಲ್ ಐ ಸೆಂಟರ್ ಬೆಂಗಳೂರಿನ ಬಾಣಸವಾಡಿಯಲ್ಲಿ ತನ್ನ 3ನೇ ಕೇಂದ್ರ ಆರಂಭಿಸಿದೆ. ಜಮಿಂದಾರ್ ಮೈಕ್ರೋಸರ್ಜಿಕಲ್ ಕೇಂದ್ರವನ್ನು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಬಿ. ಪದ್ಮನಾಭ ರೆಡ್ಡಿ ಶುಭಾರಂಭ ಮಾಡಿದರು. ಈ ಸಂದರ್ಭದಲ್ಲಿ 100 ECHS ಕಾರ್ಡ್ ದಾರರಿಗೆ ಉಚಿತ ಕಣ್ಣು ಪರೀಕ್ಷೆ ಮಾಡಲಾಗಿದೆ. ಡಾ.
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು
ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.ಇನ್ನಷ್ಟು ಮಾಹಿತಿ ತನಿಖೆಯ ನಂತರವೇ ತಿಳಿಯಬೇಕಿದೆ