Home Archive by category ರಾಜ್ಯ (Page 68)

ಕನ್ನಡ ದಿನಪತ್ರಿಕೆ – ಕನ್ನಡ ಪುಸ್ತಕ ಓದಿ : ಸುನಿಲ್ ಕುಮಾರ್

ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ

ಸಭೆ ಸಮಾರಂಭದಲ್ಲಿ ಹಾರ, ತುರಾಯಿ ಬೇಡ, ಕನ್ನಡ ಪುಸ್ತಕಗಳನ್ನು ನೀಡಿ:ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈಗಾಗಲೇ ಇಂಧನ ಸಚಿವ ಸುನಿಲ್ ಕುಮಾರ್ ತನಗೆ ಹೂ,ಹಾರ, ತುರಾಯಿ ತರಬಾರದು ಅದರ ಬದಲಿಗೆ ಪುಸ್ತಕ ತನ್ನಿ ಎಂದು ಮನವಿ ಮಾಡಿದ್ದರು, ಈಗ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಹೂಗುಚ್ಚ,

 ಟ್ವಿಟ್ಟರ್ ಬಿಜೆಪಿ ಆಸ್ತಿಯಲ್ಲ, ಕೇಸರೀಕರಣ ಸಲ್ಲದು : ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು:  ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯನ್ನು ಸ್ಥಗಿತೊಳಿಸಿದ್ದು, ಇದನ್ನು ಪ್ರತಿಭಟಿಸಿ ಬೆಂಗಳೂರಿನ ಟ್ವಿಟ್ವರ್ ಕಚೇರಿ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ ಉದ್ಯೋಗಕ್ಕೆ ಆಯ್ಕೆ ಮಾಡುವುದಾದರೆ ಜೆಒಸಿಯನ್ನು ಪಿಯುಸಿಗೆ ತತ್ಸಮಾನವೆಂದು ಕನಿಷ್ಠ ಶೈಕ್ಷಣಿಕ ಅರ್ಹತೆಯಾಗಿ

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ

ಸಿಎಂ ಬೊಮ್ಮಾಯಿ ನಿವಾಸದೆದುರು ಮಹಿಳೆಯ ಏಕಾಂಗಿ ಪ್ರತಿಭಟನೆ

ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಇಂದು ಮಹಿಳೆಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.ಡಾ.ಗಿರಿಜಾ ಎಂಬವವರು ಪ್ರತಿಭಟನೆ ನಡೆಸಿದ್ದು, ಮಾಣಿಕ್ ಶಾ ಪರೇಡ್ ಮೈದಾನದ ನಿರೂಪಕರ ಬದಲಾವಣೆ ಮಾಡಲು ಈ ವೇಳೆ ಆಗ್ರಹಿಸಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಕನ್ನಡದಲ್ಲಿ ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಈಗಿದ್ದರೂ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ. ಇದೇ ರೀತಿ

ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ

ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಪ್ರಕಟ:ಸಚಿವ ಬಿ.ಸಿ.ನಾಗೇಶ್

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು. ಕೊರೋನಾ ಭೀತಿಯ ನಡುವೆಯೂ ಈ ಬಾರಿ 8.72ಲಕ್ಷ