ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್. ಜಿ ಅಮೀನ್, ಜೊತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ,
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು
ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ
ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್
ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಎಚ್‌ಆರ್‌ಪಿ ಭೂ ಹಗಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಆಲೂರು ತಾಲ್ಲೂಕಿನ ಹೆಚ್‌ಆರ್‌ಪಿ ಸಂತ್ರಸ್ತರಿಗೆ ಸಕಲೇಶಪುರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್‌ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು
ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ HP ಪೆಟ್ರೋಲ್ ಪಂಪ್ ಹತ್ತಿರ ಪ್ರತಿಭಟನೆ ಮಾಡಲಾಯಿತು. ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ ಮಾತನಾಡಿ,ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರಬೇಕು