ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ
ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು
ಮ್ಯಾಂಚೆಸ್ಟರ್ ಹಾಗೂ ಬರ್ಮಿಂಗ್ಹ್ಯಾಮ್ ನಗರಗಳಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದ ಅಂಗವಾಗಿ ನಡೆದ ಸಭೆಯಲ್ಲಿ ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉಪಸ್ಥತರಿದ್ದರು.ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕರಾದ ಯುವರಾಜ್, ಸ್ಕೃವೇ ಮನು
ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು
ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉದ್ಘಾಟಿಸಿದರು. ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕರಾದ ಯುವರಾಜ್ ರವರು ಭಾಗವಹಿಸಿದ್ದರು. ಕೋವಿಡ್
ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ ನಿಯಮದಲ್ಲಿ ಸ್ವಾಮೀಜಿಯವರ ಸುಪುತ್ರ ಶ್ರೀ ವೇದ ನಂದ ಸ್ವಾಮೀಜಿಯವರು ಈ ವರ್ಷ ನವರಾತ್ರಿ ಉತ್ಸವವನ್ನು
ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಸತ್ಯಜಿತ್
ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ
ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ