Home Archive by category ರಾಷ್ಟ್ರೀಯ (Page 22)

ಒಡಿಶಾ ರೈಲು ದುರಂತ: ಅಪಘಾತದ ಮೂಲ ಕಾರಣ ಪತ್ತೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತ ಪ್ರಕರಣಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288ಮಂದಿ ಮೃತಪಟ್ಟಿದ್ದು, 1100ಕ್ಕೂ

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ ಪ್ರತಿಷ್ಠಾಪಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನ ಸಮಾರಂಭದಲ್ಲಿ ಅವರು ಭಾಗಿಯಾದರು. ಎಲ್ಲ ಧಾರ್ಮಿಕ ವಿಧಿ ವಿಧಾನಗಳು ಪೂರ್ಣಗೊಂಡ ನಂತರ ನರೇಂದ್ರ ಮೋದಿ ಅವರು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ ಭವನವನ್ನು

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಿರಿಯ ವಕೀಲ ವಿಶ್ವನಾಥನ್, ನ್ಯಾಯಮೂರ್ತಿ ಮಿಶ್ರಾ ಪ್ರಮಾಣ ವಚನ ಸ್ವೀಕಾರ

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು . ಈ ಮೂಲಕ ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಪೇ ಚಾನಲ್‍ಗಳ ಗ್ರಾಹಕರ ಮಾಸಿಕ ದರ ಏರಿಕೆ

ಕೇಂದ್ರ ಸರಕಾರವು ಎನ್‍ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್‍ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್‍ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು ದಿನಗಳ ಹಿಂದೆ ಕೇಬಲ್ ಆಪರೇಟರ್ ಪ್ರತಿಭಟನೆ ನಡೆಸಿದ್ದು, ಆದರೂ ಪೇ ಚಾನೆಲ್‍ಗಳ ಮಾಸಿಕ ದರವನ್ನು ಏರಿಸಿರುತ್ತಾರೆ. ಹಾಗಾಗಿ ಎಲ್ಲ ಗ್ರಾಹಕರ ಮಾಸಿಕ ದರವು ಹೆಚ್ಚಾಗಿದ್ದು, ಗ್ರಾಹಕರು ಸ್ಥಳೀಯ ಕೇಬಲ್

ತಮಿಳಿನಾಡಿನ ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ

ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ “ದಿ ಎಲಿಫೆಂಟ್ ವಿಸ್ಪರರ್ಸ್’ನ ಪ್ರಮುಖ ಪಾತ್ರಧಾರಿ ಗಳಾದ ಕಾವಾಡಿ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮೈಸೂರಿನಲ್ಲಿ ಭಾನುವಾರ ನಡೆದ `ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ, ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರರ್ಸ್

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10

ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‍ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್

ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ.  ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ‘ದಿ

ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷ ಬೆಂಬಲಿಸಿ : ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್

ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ