Home Archive by category ರಾಷ್ಟ್ರೀಯ (Page 23)

ಕೇಂದ್ರ ಬಜೆಟ್‍ನ ಜನವಿರೋಧಿ ನಿರ್ದೇಶನ ಕೂಡಲೇ ಹಿಂಪಡೆಯಬೇಕು : ಮಂಜೇಶ್ವರ ವಲಯ ಸಿಪಿಐ ಸಮಿತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನೆ

ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್

2023 ಬಜೆಟ್ ಹೈಲೈಟ್ಸ್

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ  ಮುಂಚಿತವಾಗಿ  ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ನೇಪಾಳ, ರನ್‌ವೇಯಲ್ಲಿ 68 ಪ್ರಯಾಣಿಕರಿದ್ದ ವಿಮಾನ ಪತನ

ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್‌ವೇ ಸಮೀಪ ಪತನಗೊಂಡಿದೆ. ಪತನಗೊಂಡ

ಪತನವಾದ ನೇಪಾಳ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರು

ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್‌ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ ಟ್ವೀಟ್‌ನಲ್ಲಿ ಖಚಿತಪಡಿಸಿದೆ. 15 ವಿದೇಶಿಯರು ಸೇರಿದಂತೆ 72 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಪ್ರಯಾಣಿಕ ವಿಮಾನವು ಪ್ರಮುಖ ಪ್ರವಾಸಿ ತಾಣವಾದ ಪೋಖರಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನದಿಯ ಕಮರಿಗೆ ಬಿದ್ದು ಪತನಗೊಂಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಆಪ್ ರಾಜ್ಯ, ಜಿಲ್ಲಾ ಸಮಿತಿ ಬರ್ಕಾಸ್ತು

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಘಟಕದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಯವರು, ಕರ್ನಾಟಕ ರಾಜ್ಯ, ಜಿಲ್ಲೆಗಳಲ್ಲಿನ ಎಲ್ಲಾ ಪದಾಧಿಕಾರಿಗಳು, ಘಟಕಗಳನ್ನು ಅನ್ವಯಿಸುವಂತೆ ವಿಸರ್ಜಿಸಿರುತ್ತಾರೆ. ಎಲ್ಲಾ ವಿಧಾನಸಭಾ ಅಭ್ಯರ್ಥಿ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪೂರ್ಣಪ್ರಮಾಣದಲ್ಲಿ ಸಕ್ರಿಯವಾಗಿ ಪಕ್ಷದ ನಾಯಕರು, ಕಾರ್ಯಕರ್ತರ ಸಮನ್ಚಯದಲ್ಲಿ ಪಕ್ಷದ ಪ್ರಚಾರ ಅಭಿಯಾನದಲ್ಲಿ ಭಾಗವಹಿಸುತ್ತಾ, ಶೀಘ್ರದಲ್ಲೇ ಹೊಸದಾಗಿ, ರಾಜ್ಯ ಚುನಾವಣಾ ಉಸ್ತುವಾರಿ

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ. ಭಾರತೀಯ