ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್‌ನ ಅಹಮದಾಬಾದ್ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಗುಜರಾತ್‌ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ತಾಯಿ ಅವರ ಆರೋಗ್ಯ ಸ್ಥಿತಿ
ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್‍ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್‍ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ
ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ
ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ. ಇದನ್ನು ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ
ಡಿಜಿಟಲ್ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್ 1 ರಿಂದ ರಿಟೇಲ್ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಗಾಗಿ ಪ್ರಾಯೋಗಿಕವಾಗಿ
ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ ಕಾರ್ಯಾಚರಣೆ ನಡೆಸಿ ಭಾರೀಯ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ಕಂಕಸಂತುರೈ ಬಂದರಿಗೆ ಕರೆ
ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ



























