Home Archive by category ರಾಷ್ಟ್ರೀಯ (Page 25)

ವಿ4 ಸ್ಟ್ರೀಮ್‌ನಲ್ಲಿ ತೆರೆಕಂಡ ಟು ಆಂಡ್ ಮೀ ತುಳು ಸಿನಿಮಾಕ್ಕೆ ಪ್ರೇಕ್ಷಕರು ಫಿದಾ

ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್

ಮುಂಬೈಯ ಬಿಲ್ಲವರ ಎಸೋಸಿಯೇಶನ್ ವತಿಯಿಂದ ಆಟಿಡೊಂಜಿ ದಿನ

ಮುಂಬೈ :ಬಿಲ್ಲವರ  ಎಸೋಸಿಯೇಶನ್ ಮುಂಬಾಯಿ. ಕಾ0ದಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದ  ವತಿಯಿಂದ ಅಗಷ್ಟ್  15 ರಂದು  ಸ್ವಾತಂತ್ರ್ಯ  ದಿನಾಚರಣೆಯ  ದಿನದಂದು ರವಿವಾರ  ಕಾ0ದಿವಲಿಯ  ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ  ಆಟಿಡೊ0ಜೆ ಕೂಟ  ಬಹಳ  ವಿಜೃಂಭಣೆಯಿಂದ ಜರಗಿತು.  ಅಂದಿನ ಕಾರ್ಯಕ್ರಮಕ್ಕೆ ಬಿಲ್ಲವರ ಎಸೋಸಿಯೇಶನಿನ ಉಪಾಧ್ಯಕ್ಷರಾದ ಶಂಕರ್ ಡಿ ಪೂಜಾರಿ, ಪ್ರಧಾನ ಕಚೇರಿಯ ಪ್ರತಿನಿಧಿಯಾದ ಹರೀಶ್ ಪೂಜಾರಿ ಕೋಕರ್ನೆ. ಜೊತೆ ಕೋಶಾಧಿಕಾರಿಯವರಾದ ಸದಾಶಿವ 

ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ – ಸಚಿವ ಡಾ. ನಾರಾಯಣಗೌಡ

ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ. ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ ಹೆಗ್ಗುರುತಾಗಿರುವ ವಧುವಿನ ಅದ್ಧೂರಿ ಪ್ರವೇಶವನ್ನು ಚಿತ್ರಿಸಿದೆ. ಕಲಾತ್ಮಕವಾಗಿ ಚಿತ್ರೀಸಲಾದ 3 ನಿಮಿಷಗಳ ಈ

ಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನವಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ ಉದ್ಯೋಗಕ್ಕೆ ಆಯ್ಕೆ ಮಾಡುವುದಾದರೆ ಜೆಒಸಿಯನ್ನು ಪಿಯುಸಿಗೆ ತತ್ಸಮಾನವೆಂದು ಕನಿಷ್ಠ ಶೈಕ್ಷಣಿಕ ಅರ್ಹತೆಯಾಗಿ

ನವೀನ್ ಪಟ್ನಾಯಕ್ – ಹಾಕಿ ಕ್ರೀಡೆಯ ರಿಯಲ್ ಹಿರೋ

ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ

ಟೋಕಿಯೋ ಒಲಿಂಪಿಕ್ಸ್: ಭಾರತದ ಪುರುಷರ ಹಾಕಿ ತಂಡದ ಐತಿಹಾಸಿಕ ಸಾಧನೆ

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.