ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ. ಈ ಬಗೆಗೆ ಸರ್ವೋಚ್ಚ ನ್ಯಾಯಾಲಯವು ಜನರ ಒಳಿತಿಗಿಂತ ಲಸಿಕೆ ಕಂಪೆನಿಗಳ ಲಾಭ ಮುಖ್ಯವಾಯಿತೇ ಎಂದು ಬಿಜೆಪಿ ಒಕ್ಕೂಟ ಸರಕಾರವನ್ನು ಹಿಂದೆಯೇ ಪ್ರಶ್ನಿಸಿದ್ದೂ ಆಗಿದೆ. ಸುಪ್ರೀಂ
ಉತ್ತರಾಖಂಡ ಸರಕಾರವು ರಾಮದೇವ್ ಅವರ ಆಯುರ್ವೇದ ಸಂಸ್ಥೆಯ 14 ಉತ್ಪನ್ನಗಳ ಪರವಾನಗಿ ರದ್ದು ಪಡಿಸಿದೆ. ಆ ಬಗೆಗೆ ಸಂಪೂರ್ಣ ಮಾಹಿತಿಯನ್ನು ಇಂದು ಬೆಳಿಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದೆ. ದಿವ್ಯಾ ಫಾರ್ಮಸಿಯ ದೃಷ್ಟಿ ಐ ಡ್ರಾಪ್, ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ್, ಮುಕ್ತಾ ವಟಿ ಎಕ್ಸ್ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್, ಮಧುನಾಶಿನಿ ವಟಿ, ಲಿವಾಮೃತ್ ಅಡ್ವಾನ್ಸ್, ಲಿವೋ ಗ್ರಿಟ್ ಈ ಎಲ್ಲ
ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ. ಸುಂಟರಗಾಳಿ ಬಳಿಕ ದಕ್ಷಿಣ
ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ‘ಸುಳ್ಳಿನ ಪತ್ರ’ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ಖಾತರಿಗಳು ‘ಸುಳ್ಳುಗಳ ಖಾತರಿಗಳಾಗಿವೆ’ ಎಂದು ಟೀಕಿಸಿದ್ದಾರೆ. ಮೋದಿ ಅವರು, ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವುದು, ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣ ಸೇರಿದಂತೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾರಾಗಿದ್ದಾರೆ.
ಭಾರತದ ಸಂವಿಧಾನ ಶಿಲ್ಪಿ, ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾದ ಬಿ.ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನವಾಗಿದ್ದು, ದೇಶದ ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗ್‌ದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡು ದೇಶದ ಹಲವು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,
ದೆಹಲಿ: ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ
ರಾಜಕೀಯ ಶುದ್ಧೀಕರಣದ ಬಗ್ಗೆ ಸ್ವಂತ ತೀರ್ಮಾನ ತೆಗೆದುಕೊಳ್ಳಲು ನನ್ನಿಂದ ಸಾಧ್ಯ, ಆದರೆ, ಸಮಾನ ಮನಸ್ಕರಾಗಿ ನನ್ನೊಂದಿಗೆ ಕೈಜೋಡಿಸಲು ಯಾರಾದರೂ ಬರುವುದಾದರೆ ಎಲ್ಲರಿಗೂ ಸ್ವಾಗತ ಎಂದು ಸಂಸದ, ಮಾಜಿ ಸಿಎಂ ಡಿ. ವಿ. ಸದಾನಂದ ಗೌಡ ಹೇಳಿದರು. ಅವರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಂಪುಗಾರಿಕೆಗಳಿದ್ದವು. ದೆಹಲಿ ಬಣ ಹಾಗೂ ಕರ್ನಾಟಕ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೂ ಟಿಕೆಟ್ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಸಸಿಕಾಂತ್ ಸೆಂಥಿಲ್ ಅವರು ಮೂಲತಃ ತಮಿಳುನಾಡಿನವರು. ಇವರು
ರಶಿಯಾದ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲಿನಲ್ಲಿ ನಾಲ್ವರು ಬಂದೂಕು ಹಿಡಿದವರು ನುಗ್ಗಿ ಹಲವು ಸ್ಫೋಟ ನಡೆಸಿ, ಮನ ಬಂದಂತೆ ಗುಂಡು ಹಾರಿಸಿದ್ದರಿಂದ ಸತ್ತವರ ಸಂಖ್ಯೆಯು 115ಕ್ಕೆ ಏರಿಕೆಯಾಗಿದೆ. ನಾಲ್ವರು ಗನ್‌ಮ್ಯಾನ್ ಸಹಿತ 11 ಜನರನ್ನು ಬಂಧಿಸಲಾಗಿದೆ. 145ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಾರೀ ಹೊಗೆ ಆವರಿಸಿಕೊಂಡುದು ಮತ್ತು ಜನರ ಕಂಡತ್ತ ಓಡತೊಡಗಿದ್ದರಿಂದ ಏನು ನಡೆಯುತ್ತದೆ ಎಂಬುದೇ ತಿಳಿದು ಬಂದಿಲ್ಲ. ಸ್ಫೋಟಕ ಮತ್ತು ಗನ್ ಎರಡೂ ಬಳಸಿದ್ದರಿಂದ ಭಾರೀ