ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದಾರೆ.ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ, ವಿಟ್ಲ ಜೇಸೀಸ್ ಸ್ಕೂಲ್
ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ತಳಕ್ಕಾಗಮಿಸಿದ್ದಾರೆ.
ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.
ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ
ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ
ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು
ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ. ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ, ಪಾಂಡವರ ಒಲೆಯ ಕುರುಹು ಇದ್ದು ಆ ಸ್ಥಳವನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್ ಹೇಳಿದ್ದಾರೆ.
ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ
ವಿಟ್ಲ: ಇಂಡಿಯ HIP HOP ಚಾಂಪಿಯನ್ ಶಿಪ್ 2023 ಗೆ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಸೆಮಿಫೈನಲ್ ಗೆ ಆಯ್ಕೆಯಾಗಿದೆ. ರಾಕೇಶ್ ವಿಟ್ಲ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಜನವರಿ 5 ರಂದು ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದೆ.




























