ಉಜಿರೆ: ವಿದ್ಯಾರ್ಥಿಗಳು ಗುರು ಕಲಿಸಿಕೊಟ್ಟದ್ದನಷ್ಟೇ ಕಲಿಯುವುದಕ್ಕೆ ಸೀಮಿತರಾಗದೆ, ಸ್ವಯಂ ಅಧ್ಯಯನವನ್ನು ನಡೆಸುವುದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್ ಹೆಚ್ ಮಂಜುನಾಥ್ ನುಡಿದರು.ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಧ. ಮಂ.
ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.
ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ ಬಂಟ್ವಾಳ ತಾಲೂಕು ಇದರ ವಿಸ್ತೃತ ನೂತನ ವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿದರು. ನೂತನ ಶಿಕ್ಷಣ ಸಂಸ್ಥೆಯ ವ್ಯವಸ್ಥೆಯಲ್ಲಿ ಆಧುನಿಕ ಸೌಲಭ್ಯದ ಬಗ್ಗೆ ಪರಿಶೀಲನೆ ನಡೆಸಿ ವಿವಿಧ ಮಾಹಿತಿಯನ್ನು ಪಡೆದುಕೊಂಡರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕ
ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು ತಿಳಿಸಿದ್ದಾರೆ . ಅವರು ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ. ಮನುಷ್ಯನ ಜೀವನವನ್ನು ಹಸನುಗೊಳಿಸುವ ಶಕ್ತಿ ಉತ್ತಮ ಹವ್ಯಾಸಗಳಿಗಿದೆ ಎಂದು ಅವರು ತಿಳಿಸಿದರು.
ಉಜಿರೆ, ಜೂನ್ 6: ಪರಿಸರಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ನೈಸರ್ಗಿಕ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಹೊಳೆಸುವ ಆಲೋಚನಾ ಕ್ರಮಗಳು ಭೌತಶಾಸ್ತ್ರ ಮತ್ತು ಜೀವವಿಜ್ಞಾನದ ಸಂಶೋಧನಾತ್ಮಕ ಪ್ರಜ್ಞೆಯಿಂದ ನಿರೂಪಿತವಾಗುತ್ತವೆ ಎಂದು ಉಜಿರೆ ಎಸ್‍ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅಭಿಪ್ರಾಯಪಟ್ಟರು. ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗ ಮತ್ತು ಫಿಜಿಕಾ ಸಂಘದ ಸಹಯೋಗದಲ್ಲಿ ‘ಇವೆಂಟ್ ಹಾರಿಜಾನ್’
ಉಜಿರೆ, ಜೂನ್ 6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್. ಎಸ್. ಎಸ್. ರಾಮಕೃಷ್ಣ ಮಟ್ಟೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಮತ್ತು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಜಂಟಿಯಾಗಿ ‘ಮಾಲಿಕ್ಯುಲರ್ ಡಾಕಿಂಗ್ ಮತ್ತು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ
ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ


























