ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ.
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ
ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ ಎನಿಸಿತು. ಬ್ರಹ್ಮಾಸ್ತ್ರವು ಉತ್ತಮ ವಿಎಫ್‌ಎಕ್ಸ್ ಚಲನಚಿತ್ರ ಪ್ರಶಸ್ತಿಗೆ ಬಾಜನವಾಯಿತು.ಪ್ರಶಸ್ತಿ
ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕ್ರತಿಯನ್ನು,ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ ನಡೆಯಲಿದೆ ಎಂದು ಸ್ಯಾಂಡೀಸ್ ಕಂಪನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದರು. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಜೂನ್ 16ರಂದು ಭಾನುವಾರ ಸಂಜೆ 3 ಗಂಟೆಗೆ ಸರಿಯಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ
ಕಾನೂನು ತಪ್ಪಿ ಮಗು ದತ್ತು ಪಡೆದಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ರೀಲ್ಸ್ ನಟಿ ಸೋನು ಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಸಿಜೆಎಂ ಅವರು ಜಾಮೀನು ಮಂಜೂರು ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಸೋನುಗೌಡ ಅವರು ಕಾನೂನು ನಿಯಮ ಪಾಲಿಸಿಲ್ಲ ಎಂದು ಅವರನ್ನು ಬಂಧಿಸಲಾಗಿತ್ತು. ವಾರದಲ್ಲಿ ವಿಚಾರಣೆ ಮುಗಿಯದೆ ಮೂರು ವಾರ ಎಳೆದಿತ್ತು. ಈಗ ಮ್ಯಾಜಿಸ್ಟ್ರೇಟ್ ಅವರು ಶರತ್ತುಬದ್ಧ ಜಾಮೀನು ನೀಡಿದ್ದಾರೆ.
ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್‌ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.ನಟ ರೂಪೇಶ್ ಶೆಟ್ಟಿ
ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಬೆಂಗಳೂರಿನ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿ ಕೊಳ್ಳುತ್ತಿದ್ದರು. ದಕ್ಷಿಣ ಕನ್ನಡ ದ ಬೆಳ್ತಂಗಡಿ ಮೂಲದ ಲೀಲಾವತಿ ಅವರು, ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ