Home Archive by category ಹಾನಿ (Page 2)

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, ಮಹಿಳೆಗೆ ಗಂಭೀರ ಗಾಯ

ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಶಾರ್ಟ್ ಸರ್ಕೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಹಲವು ಮಂದಿಯಿದ್ದು, ಘಟನೆ ಸಂಭವಿಸಿದ ತಕ್ಷಣ ಹೊರಗೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಹಿಳೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ

ಕುಣಿಗಲ್: ಬೋರ್ ವೆಲ್ ಲಾರಿ-ಕಾರು ನಡುವೆ ಅಪಘಾತ: ದ.ಕ. ಜಿಲ್ಲೆಯ ಇಬ್ಬರು ಮೃತ್ಯು

ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ೩೩ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ(35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ.ನಿತೀಶ್ ಭಡಾರಿ(35), ಪ್ರೀತಿ ಲೋಬೋ(29) ಮತ್ತು ಹರೀಶ್(62)

ಬೈಂದೂರಿನ ನಾಗೂರಿನಲ್ಲಿ ಹಾರ್ಡ್‍ವೇರ್ ಶಾಪ್‍ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ  ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ  ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ  ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ

ಶಾರ್ಟ್‌ಸರ್ಕ್ಯೂಟ್‌ : ಅಂಗಡಿ ಬೆಂಕಿಗಾಹುತಿ

ಮಂಗಳೂರಿನ ವೆಲೇನ್ಸಿಯಾ ಗೋರಿಗುಡ್ಡದಲ್ಲಿ ಜನರಲ್ ಸ್ಟೋರ್‌ವೊಂದು ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿಗಾಗುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಪಕ್ಕದಲ್ಲೇ ಇರುವ ಗ್ಯಾರೇಜ್ ಮತ್ತು ಬಾಬಾ ಸ್ಟೋರ್‌ಗೆ ಬೆಂಕಿ ತಗುಲಿದ್ದು ಹಾನಿ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕೃಷ್ಣಮೂರ್ತಿ ಮಂಜರ ಕಾರು ಅಪಘಾತ

ಕುಂದಾಪುರದ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ. ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ

ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು

ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ ಸಹಿತ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡಿದೆ ಕಾಮಗಾರಿ ಹೆಸರಲ್ಲಿ ಅಪಾಯಕಾರಿಯಾಗಿ ಹೆದ್ದಾರಿ ಮುಚ್ಚಿದ್ದು ಒಂದು ಕಡೆಯಾದರೆ, ಮತ್ತೊಂದು ಕಡೆ ಹೆದ್ದಾರಿ ಡಿವೈಡರ್ ಗಳಲ್ಲಿ ದಾರಿದೀಪಕ್ಕಾಗಿ ಎಲ್ಲೆಡೆ ಟವರ್‍ಗಳನ್ನು ನಿರ್ಮಿಸಿ ಅದೆಷ್ಟೋ ಕಾಲವಾದರೂ ದೀಪ

ನೆಲ್ಯಾಡಿ: ಶಾರ್ಟ್‌ಸರ್ಕ್ಯೂಟ್‌ನಿಂದ ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ

ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣ – ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು : ಎಸ್. ಅಂಗಾರ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ  ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್. ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು