ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಂಧ್ಯಾ
ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,23,100ರೂ. ಎಂದು
ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬೆರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ ವೈದ್ಯರ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಎ.ಎಫ್.ಐ
ಕಾಪು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ-ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿಯನ್ನು ಸ್ವೀಕರಿಸಿದರು.
ಕಾಪು:ಸಮಾಜ ಸೇವಕರು, ಶಿಕ್ಷಣ ತಜ್ಞರು, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿಧ್ಯಾವರ್ಧಕ ಸಂಘ (ರಿ.) ಶಿರ್ವದಲ್ಲಿ ಇಂದು ನಡೆದ ಶೃಧ್ಧಾಂಜಲಿ ಸಭೆಯಲ್ಲಿ ಶಾಸಕರು, ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧ್ಯಾವರ್ಧಕ ಸಂಘ ಸಂಚಾಲಕರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಸದಸ್ಯರುಗಳಾದ ನಿತ್ಯಾನಂದ ಹೆಗ್ಡೆ, ಜಗದೀಶ್ ಅರಸ್,
ಕಾಪು:ಹಿಂದೂ ಜೂನಿಯರ್ ಕಾಲೇಜು, ಶಿರ್ವ ಇದರ ಹೊಸ ಅಕಾಡೆಮಿಕ್ ಬ್ಲಾಕ್ ಮತ್ತು ಎಐ ಕೊಠಡಿ ಉದ್ಘಾಟನೆ ಮತ್ತು ಕಾಲೇಜು ವಾರ್ಷಿಕೋತ್ಸವು ಸೋಮವಾರದಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಜ್ಞಾನ ಚೈತನ್ಯ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್
ಪಡುಬಿದ್ರಿ:ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನಲ್ಲಿ ಎಟೆಂಡರ್, ಕ್ಲರ್ಕ್ ಆಗಿ 31 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾ.ಪಂ.ಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿ. ಆಚಾರ್ಯ ಉಚ್ಚಿಲ ಅವರನ್ನು ಬಡಾ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು. ಡಿ.29ರಂದು ಉಚ್ಚಿಲ ಬಡಾ ಗ್ರಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಶಿವ ಕುಮಾರ್ ಮೆಂಡನ್,




























