ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ,
ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ ಆರೋಪಿ. ಈತ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಷ್ಠಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ಹಣವನ್ನು ಪಡೆದು ನಕಲಿ
ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಯಾದ ಘಟನೆ ರವಿವಾರ ನಸುಕಿನ ವೇಳೆ ಕೋಟೇಶ್ವರದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಹಿಂಬದಿಯಲ್ಲಿ (ಹಳೆ ಗ್ರಾಪಂ ಕಟ್ಟಡ) ಕಳೆದ ನಾಲ್ಕೈದು ವರ್ಷಗಳಿಂದ ಎಸ್.ಎಲ್.ಆರ್.ಎಂ. ಘಟಕ ಕಾರ್ಯಾಚರಿಸುತ್ತಿದ್ದು ಇದರ ಕೆಳಭಾಗ, ಆಸುಪಾಸಿನಲ್ಲಿ ವಾಣಿಜ್ಯ ಕಟ್ಟಡಗಳಿವೆ. ಮೇಲ್ಭಾಗದಲ್ಲಿ ಒಣತ್ಯಾಜ್ಯ ಘಟಕವಿದ್ದು,
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ,
ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ
ಬೈಂದೂರು, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 6ನೇ ನೂತನ ಶಾಖೆ ವಿವಿಧ ಪೂಜಾ ವಿಧಿ ವಿಧಾನದ ಮೂಲಕ ಮರವಂತೆ ಸಮೃದ್ದಿ ಕಾಂಪ್ಲೇಕ್ಸ್‌ನಲ್ಲಿ ರವಿವಾರ ಸಂಭ್ರಮದಲ್ಲಿ ಲೋಕಾರ್ಪಣೆಗೊಂಡಿದೆ. ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ಭೇಟಿ ನೀಡಿ ಮಾತನಾಡಿಸಹಕಾರಿ ಕ್ಷೇತ್ರದಲ್ಲಿ ಎಸ್.ರಾಜು ಪೂಜಾರಿ ಯವರು
ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,
ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡುಕುತ್ಯಾರು ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಶನೀಶ್ವರ ಪೂಜಾ ಮಹೋತ್ಸವವು ಶ್ರೀ ಸರಸ್ವತೀ ಯಾಗ ಶಾಲೆ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ನಡೆಯಲಿದೆ. ಶ್ರೀಗಳವರ ಸಾನಿಧ್ಯದಲ್ಲಿ ಈ ಮೊದಲು ಅನೇಕ ಸಮಾಜಮುಖೀ ಕಾರ್ಯಗಳು ನಡೆದಿವೆ
ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರು ಸಹಜ ಹಾಗೂ ಕೆಲಸದ ಸ್ಥಳದಲ್ಲಿ ಮರಣ ಹೊಂದಿದ್ದಲ್ಲಿ ಅವಲಂಬಿತರಿಗೆ ಸರಕಾರ ನೀಡುಬಹುದಾದ
ಪಡುಬಿದ್ರಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಘಟಸಿದೆ. ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಕುಡುಪು ನಿವಾಸಿ ಅಭಿಷೇಕ್ (ಅಭಿ) ಎಂದು ಗುರುತಿಸಲಾಗಿದೆ. ಕಾಪು ಮೂಳೂರಿನ ಸಾಯಿರಾಧ ರೆಸಾರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ನೇಹಿತರೊಂದಿಗೆ




























