Home ಕರಾವಳಿ Archive by category ಉಡುಪಿ (Page 124)

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ವೀಕ್ಷಿಸಿದ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವ

ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು. ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್ ಡೂಮನಿಕ್ ಲೋಬೊ ಪರಂಪಳ್ಳಿ, ವಂದನಿಯ ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂದನೆಯ ಪ್ರದೀಪ್ ಕಾರ್ಡೋಜ ಮೂಡುಬೆಳ್ಳೆ ವಂದನಿಯ ಅಲ್ಬರ್ಟ್ ಕ್ರಾಸ್ತಾ ಪಿ ಯುಸ್ ನಗರ ದಿನದ ಅಂತಿಮ ಬಲಿ ಪೂಜೆಯನ್ನು ವಂದನಿಯ ಲೆಸ್ಲಿ ಡಿಸೋಜ ಅವರು ರಾತ್ರಿ

ಎರ್ಮಾಳಿನಲ್ಲಿ ಕಾಪು ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವುದು ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ. ಈಗಾಲೇ ಕಾಪು ಕ್ಷೇತ್ರಕ್ಕೆ 2900 ಕೋಟಿ ರೂಪಾಯಿ ಅನುದಾನ ತರಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಚುನಾವಣೆ ಎದುರಿಸೋಣ

ಕುಂದಾಪುರದಲ್ಲಿ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ

ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ

ಅತ್ತೂರು ಸಂತ ಲಾರೆನ್ಸ್ ಚರ್ಚ್‍ನ ಜಾತ್ರಾ ಮಹೋತ್ಸವ ಪ್ರಾರಂಭ

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ

ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ

ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್‍ಬಾಸ್ ಸೀಸನ್ 9ರ ವಿಜೇತ, ನಟ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ

ಜ.20 : ಆಳ್ವಾಸ್ ನಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ

ಪಡುಬಿದ್ರಿಯಲ್ಲಿ ಸರಣಿ ಕಳ್ಳತನ, ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳೆದ ರಾತ್ರಿ ಪಡುಬಿದ್ರಿ ಮುಖ್ಯ ಮಾರುಕಟ್ಟೆಯ ಸೂಪರ್ ಮಾರ್ಕೆಟ್ ಹಾಗೂ ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯಲ್ಲಿ ಕಳ್ಳತನ ನಡೆದಿದ್ದು ಸಹಸ್ರಾರು ರೂಪಾಯಿ ಬೆಲೆಬಾಳುವ ವಸ್ತುಗಳು ಹಾಗೂ ನಗದು ಕಳವಾಗಿದ್ದು ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆ ಸಿಕ್ಕಿದ್ದಾನೆ.ಮುಖ್ಯ ಮಾರುಕಟ್ಟೆಯಲ್ಲಿರುವ ಕೆ.ಎಸ್. ಬಜಾರ್‍ನ ಬೀಗ ಮುರಿದ ಕಳ್ಳ ಒಳ ಹೊಕ್ಕು ಒಂದು ಲ್ಯಾಪ್‍ಟಾಪ್ ಹಾಗೂ ಒಂದು ಬೊಬೈಲ್ ಕಳವು ನಡೆಸಿದ್ದಾನೆ. ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯ

ಕಾಪು : ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾ.ಹೆ. 66 ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಗೂಡಂಗಡಿಯ ಮುಂಭಾಗ ಸಂಪೂರ್ಣ ನಜ್ಹುಗುಜ್ಜಾಗಿದ್ದು ಗೂಡಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್, ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅನೇಕ ಯುವ ಮಧುಮೇಹಿಗಳು (2-25 ವರ್ಷ