ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್ 23ರಂದು ಉಡುಪಿಯಲ್ಲಿ ನಡೆದ ಕಾಲ್ನಡಿಗೆ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ರಾಜ್ಯ ಮಟ್ಟದ ಸರ್ಕಾರಿ ಎನ್ .ಪಿ.ಎಸ್
ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರಮೆರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ವಿನಯ ಕುಮಾರ್ ಸೊರಕೆ, ಮುನೀರ್ ಕಾಟಿಪಳ್ಳ, ಅಭಯ ಚಂದ್ರ
ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ
ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು ಇಲ್ಲಿನ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಐದು ನಿಮಿಷಕ್ಕೊಂದು ಬಸ್ ಗಳು ಮಂಗಳೂರು ಕಡೆ ಪ್ರಯಾಣವನ್ನು ಮಾಡುತ್ತದೆ. ಅದರಲ್ಲೂ ಬೆಳಗ್ಗಿನ ಹೊತ್ತು ಶಾಲೆ ಕಾಲೇಜು ಮತ್ತು ಉದ್ಯೋಗಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಈ ವೇಳೆ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ ಮಾಡುವ ಸಂದೇಶ ಸಾರಲಾಯಿತು. ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ
ತೆರಿಗೆ ಕಟ್ಟಲು ಒತ್ತಡ ಹೇರಿದ್ದಾರೆ ಎಂಬ ಕಾರಣಕ್ಕೆ ನಂದಿಕೂರು ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿರುವ ಕಂಪನಿಯೊಂದರ ಮುಖ್ಯಸ್ಥರು ಪಲಿಮಾರು ಗ್ರಾ.ಪಂ. ಅಧ್ಯಕ್ಷರ ಛೇಂಬರ್ ಗೆ ಹೋಗಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ ಗ್ರಾ.ಪಂ. ಆಢಳಿತ ಸಮಿತಿ ಸದಸ್ಯರು ಅಧ್ಯಕ್ಷರೊಂದಿಗೆ ತೆರಳಿ ಕಂಪನಿ ಪ್ರಮುಖರಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸೃಷ್ಠಿ ಹೆಸರಿನ ಕಚ್ಚಾವಸ್ತುಗಳ ಮರು ಬಳಕೆ ಕಂಪನಿಯ ಪ್ರಮುಖರೇ ಆರೋಪಿಗಳು, ಅದಲ್ಲದೆ ಇದೇ ಕಂಪನಿಯ ವಠಾರದಲ್ಲಿ
ಮಣಿಪಾಲ, 8ನೇ ಡಿಸೆಂಬರ್2022:ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಇತ್ತೀಚೆಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು, ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು. ಅವರು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಮತ್ತು ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಯಿತು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು
ಕುಂದಾಪುರ: ಡೆಡ್‍ಲಿಫ್ಟ್‍ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್‍ವೆಲ್ತ್‍ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್‍ನ
ಕುಂದಾಪುರ : ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್‍ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವೀತ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದು ಕಾಂತಾರ ಚಲನಚಿತ್ರ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಭಿಮಾನ ವ್ಯಕ್ತಪಡಿಸಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಕುಂದಾಪುರ ಬಾರ್ ಅಸೋಸೀಯೇಶನ್ ಆಶ್ರಯದಲ್ಲಿ ನಡೆದ




























