ಮಣಿಪಾಲ 19ನೇ ನವೆಂಬರ್ 2022:ಆಂಟಿಮೈಕ್ರೊಬಿಯಲ್ (ಸೂಕ್ಷ್ಮಜೀವಿ) ನಿರೋಧಕ ದೋಷಗಳಿಂದ ಯಾರಾದರೂ, ಯಾವುದೇ ವಯಸ್ಸಿನವರು , ಯಾವುದೇ ರಾಷ್ಟ್ರದವರು ಸೋಂಕುಗಳಿಗೆ ಬಲಿಯಾಗಬಹುದು. ಸರಿಯಾದ ಮೇಲ್ವಿಚಾರಣೆ ಮತ್ತು ಸಲಹೆಯಿಲ್ಲದೆ ನೀವು ಹೆಚ್ಚು ಪ್ರತಿಜೀವಕಗಳನ್ನು ತೆಗೆದುಕೊಂಡರೆ, ನಿಮ್ಮ ವೈದ್ಯರಿಗೆ ನಿಮ್ಮ ಸೋಂಕಿಗೆ ಚಿಕಿತ್ಸೆ ನೀಡಲು ಕಷ್ಟವಾಗುತ್ತದೆ ಮತ್ತು ಈ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲೆಗೆ ಪ್ರವಾಸವನ್ನು ಕೈಗೊಂಡು ಇಂದು ಶುಕ್ರವಾರದಂದು ಉಡುಪಿಗೆ ಆಗಮಿಸಿದ್ದು, ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಣಿಪಾಲದ ಮಾಹೆ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸುತ್ತಾ, ತಮ್ಮ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಮಾಹೆ ಸಂಸ್ಥೆ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ
ಮಣಿಪಾಲ, 14 ನವೆಂಬರ್ 2022: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು 14ನೇ ನವೆಂಬರ್ 2022 ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಈ ವರ್ಷದ ದ್ಯೇಯ ವಾಕ್ಯ “ನಾಳೆಯನ್ನು ರಕ್ಷಿಸಲು ಮದುಮೇಹ ಶಿಕ್ಷಣ”. ವಿಶ್ವ ಮಧುಮೇಹ ದಿನವು ಮಧುಮೇಹವನ್ನು ಜಾಗತಿಕ
ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ನಡೆದ ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ ನಾವುಂದ-ಬಡಾಕೆರೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ವಿನಯಾ ರಾಯ್ಕರ್ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜದ ಜನಾಂಗವು ರಾಜಕೀಯವಾಗಿ,ಸಮಾಜಿಕವಾಗಿ ಅಭಿವೃದ್ಧಿ ಹೊಂದಲು
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ ೧೪ ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ|
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ `ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಲಿದೆ. ಭಾನುವಾರದಂದು ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00ರ ವರೆಗೆ, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಲಿದೆ. ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವವರು ಮೂತ್ರಪಿಂಡ
ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ
ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಸಿಕೊಂಡ ವಾಸುದೇವ ಆರ್. ಕೋಟ್ಯಾನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮುಂಬಯಿಯಲ್ಲಿ ಇಂದು ಸಂಜೆ 7 ಗಂಟೆಗೆ ಜರುಗಲಿದೆ.
ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮಂಜೂರು ಮಾಡಿದ ಕೆಲವು ಯೋಜನೆಗಳನ್ನು ಇಂದು ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಡಳಿತ ಜನತೆಗೆ ತಪ್ಪು ಮಾಹಿತಿ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಇಂತಹ ಕೆಳಮಟ್ಟದ ರಾಜಕಾರಣ ಹಿಂದೆ ಯಾವೊಬ್ಬ ಜನಪ್ರತಿನಿಧಿಯೂ ಮಾಡಿಲ್ಲ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ



























