ಕುಂದಾಪುರ: ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧಿಯ ಸಿಂಪಡನೆ
ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳಾದ ಎಸ್. ಅಂಗಾರ, ಸುನೀಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ರಘಪತಿ ಭಟ್, ಉದಯ ಕುಮಾರ್ ಶೆಟ್ಟಿ ಮುಂತಾದವರಿದ್ದರು.
ಕಾಪುವಿನಲ್ಲಿ ನಡೆಯಲಿರುವ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಬರುವವರಿದ್ದು, ಕಾರ್ಯಕ್ರಮ ಕಾಪುವಿನಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗದು ಎಂಬುದಾಗಿ ಉಸ್ತುವಾರಿ ಸಚಿವ ಅಂಗಾರ ಹೇಳಿದರು.ಅವರು ಕಾಪುವಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇದು ಪಕ್ಷದ ಕಾರ್ಯಕ್ರಮ ಆಗಿದ್ದು ಪೇಟೆ ಒಳಭಾಗದಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು
ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು. ಜಿಲ್ಲಾ
ಕುಂದಾಪುರದ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ. ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ
ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿತು. ಕೆಎಂಸಿ ಮಣಿಪಾಲದ ಡೀನ್ ಡಾ ಶರತ್ ಕೆ
ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋಆಹಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಭಾಜಪ ಅಧ್ಯಕ್ಷರಾದ ಶ್ರೀಕಾಂತ್
ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ ನಡೆಯುವ ಸ್ಥಳ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು, ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಮಾಲೋಚನೆ ನಡೆಸಿದರು. ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ಕ್ಷೇತ್ರದ
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು. ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್‍ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ




























