ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ,
ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೫-೨೬ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಬೈಂದೂರು ರೋಟರಿ ಕ್ಲಬ್ ನ
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಕರಂಬಳ್ಳಿ ನಿವಾಸಿ ಶೀನ ನಾಯ್ಕ ಇಂದಿರಾ ಬಾಯಿ ಇವರ ಮಗ ಚಂದ್ರಶೇಖರ್ ನಾಯ್ಕ ಉಡುಪಿಯ ತೆಂಕ್ಕನಿಡಿಯೂರು,ಕರಂಬಳ್ಳಿ ಬೈಲು,ಪೆರಂಪಳ್ಳಿ ಬೈಲಿನಲ್ಲಿ ಸುಮಾರು 50 ಎಕರೆ ಮೇಲ್ಪಟ್ಟು ಇವರದೇ ಸ್ವಂತ ಟ್ಯಾಕ್ಟರ್ ಆಧುನಿಕ ನಾಟಿ ಯಂತ್ರ ಕಟಾವು ಯಂತ್ರ ಮೂಲಕ ಮಾಡುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಒಂದು ಕಾಲಕ್ಕೆ ಉಡುಪಿಯಲ್ಲಿ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ
ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ ವಿಷಯ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿ ಬಂದಿರುವ ಖ್ಯಾತ ವೈದ್ಯರೂ ಹೈ ಟೆಕ್ ಹಾಸ್ಪಿಟಲ್
ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ ಆಸ್ತಿ ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಲಾಯ್ತು ಎಂದರು. ಈ ಸಂದರ್ಭದಲ್ಲಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ಪದಾಖಲೆಗಳೊಂದಿಗೆ
ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ ಅಗತ್ಯವೂ ಎಲ್ಲೂ ಬರಬಾರದೆಂದು ಈಗಾಗಲೇ ಹೇಳಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸಂಜೆ ಕೊಲ್ಲೂರಿನಲ್ಲಿ ವಾಸ್ತವ್ಯ ಮಾಡಿದ್ದ ಡಾ.ಪರಮೇಶ್ವರ್ ಇಂದು ಬೆಳಗ್ಗೆ ಮೂಕಾಂಬಿಕಾ
ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಸ್ಲ್ಯಾಬ್ ಮನೆಯಾದ್ದರಿಂದ ಮನೆಯಲ್ಲಿ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.




























