ಕಾಪು ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಜಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಮೇಲೆ ನಡೆದಿದೆ. ಸ್ಕೂಟರ್ ಸವಾರ ಮಲ್ಲಾರು ಕೋಟೆ ರೋಡ್ ನಿವಾಸಿ ಜಾಫರ್ ಎಂಬವರ ಪುತ್ರ ಕಟಪಾಡಿ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ಅಲ್ಪಾಜ್ (17). ಈತ ತನ್ನ ಸಹಪಾಠಿಯೊಂದಿಗೆ ಉಡುಪಿ ಕಡೆಗೆ
ವಿದ್ಯುತ್ ಅವಘಢದಿಂದ ಮುಚ್ಚಿದ ಅಂಗಡಿಯ ಒಳಗೆ ಬೆಂಕಿ ಕಾಣಿಸಿಕೊಂಡು ಅಕ್ವೇರಿಯಂಗಳ ಸಹಿತ ವಿವಿಧ ಜಾತಿಗಳ ಹಕ್ಕಿ ಸಹಿತ ವಿವಿಧ ಜಾತಿಗಳ ಮೀನುಗಳು ಬೆಂಕಿಯಲ್ಲಿ ಸಿಲುಕಿ ಭಸ್ಮವಾದ ಘಟನೆ ನಡೆದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪಡುಬಿದ್ರಿ ಮುಖ್ಯ ಮಾರುಕಟ್ಟೆ ರಸ್ತೆಯ ಪೊಲೀಸ್ ಠಾಣಾ ಸಮೀಪದ ಗ್ರಾ.ಪಂ. ಕಟ್ಟಡದ ಅವಿಘ್ನ ಅಕ್ವೇರಿಯಂ ಮಾರಾಟದಂಗಡಿಯಲ್ಲಿ ಮುಂಜಾನೆ ಹೊಗೆ ಕಾಣಿಸಿಕೊಂಡಿದ್ದು ಇದನ್ನು ಕಂಡ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು
ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಸಂಜೆ 6 ಗಂಟೆ ತನಕ ಪತ್ತೆಯಾಗಿಲ್ಲ. ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ
ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು
ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಧ್ಯಾಹ್ನದ ಬಳಿಕ ಕುಂದಾಪುರಕ್ಕೆ ಬಂದಿದ್ದ ಅವರನ್ನು
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ ಕೆ ಮುದ್ದುಕೃಷ್ಣ ಅವರ ಆತ್ಮಕಥನ ‘ಹಾಡು ಹಿಡಿದ ಜಾಡು ‘ ಕೃತಿ ಅನಾವರಣವು ಶನಿವಾರ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಲೋಕಾರ್ಪಣೆಗೊಂಡಿತು. ಕೃತಿಯನ್ನು ಚಲನಚಿತ್ರ ನಿರ್ದೇಶಕ ಹಾಗೂ
ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಆ.7ರ ರಾತ್ರಿ ನಡೆದಿದೆ. ರಕ್ಷಣಾ ಕಾರ್ಯದಲ್ಲಿ ಪುತ್ತೂರಿನ ತೌಫಿಕ್ ಸಹಕರಿಸಿದ್ದಾರೆ. ಯುವಕನು ತನ್ನ ಹೆಸರು ಬಸವನ್ ತಂದೆ ನಂಜುಂಡ ತಾಯಿ ರುದ್ರಮ್ಮ ಹಾಗೂ ಮನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್
ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ
ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ




























