Home ಕರಾವಳಿ Archive by category ಉಡುಪಿ (Page 147)

ಉಪ್ಪುಂದ : ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಲ್ನಡಿಗೆ ಜಾಥ

75ನೇ ಸ್ವಾತಂತ್ರೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಲ್ನಡಿಗೆ ಜಾಥವನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು… ದೇಶ ಸ್ವಾತಂತ್ರ್ಯ ಪಡೆಯಲು ಬಹಳಷ್ಟು ತ್ಯಾಗ ಬಲಿದಾನಗಳನ್ನು ನಡೆಸಿದೆ. ಇದೀಗ ದೇಶ ಕಾಯುವೆ ಎಂಬವರು ನಾನಾ ಹೆಸರಲ್ಲಿ ಗುರುತಿಸಿಕೊಂಡು ಬ್ರಿಟಿಷರೊಂದಿಗೆ ಸೇರಿಕೊಂಡು ದೇಶಕ್ಕೆ ಮೋಸ ಮಾಡಿದವರಾಗಿದ್ದಾರೆ ಎಂದರು. ಮಾಜಿ ಸಚಿವ

ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ ದನವನ್ನು ಮೇಲೆ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ದನ ಆರೋಗ್ಯವಾಗಿದ್ದು ಆರೈಕೆ

ಬೆಳಪು : ಸಾವಿನಲ್ಲೂ ಒಂದಾದ ದಂಪತಿ

ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು ಸವಾಲುಗಳನ್ನು ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು

ಕಾರ್ಕಳದ ಭಾರಿ ಮಳೆ : ತುಂಬಿ ಹರಿದ ಸುವರ್ಣ ನದಿ

ಕಾರ್ಕಳ: ಪಶ್ಚಿಮ ಘಟ್ಟ ಪ್ರದೇಶ ಕುದುರೆ ಮುಖ ಅಭಯಾರಣ್ಯ ವ್ಯಾಪ್ತಿಯ ನಾರಾವಿ ಭಾಗದಲ್ಲಿ ನಿನ್ನೆ ಸಂಜೆ ವೇಳೆಗೆ ಭಾರಿ ಸ್ಪೋಟದ ಸದ್ದು ಕೇಳಿ ಬಂದಿದ್ದು, ಸತತವಾಗಿ ಮಳೆ ಸುರಿದಿದೆ. ಇದರ ಜೊತೆ ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತಿತ್ತು ಎನ್ನಲಾಗಿದೆ.ಸ್ಥಳೀಯರು ಹೇಳುವಂತೆ ಜಲಸ್ಪೋಟ ವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮಕ್ಕಳ ಅಸ್ಥಿ ಮಜ್ಜೆಯ ಕಸಿ ಸೇವೆಗಳು- ನೊಂದ ರೋಗಿಗಳಿಗೆ ಭರವಸೆಯ ಆಶಾಕಿರಣ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ

ಕಾರ್ಕಳದ ಮಿಯಾರು ಗ್ರಾಮದಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ

ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್‍ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು, ಕೈಗಾರಿಕಾ ಪ್ರದೇಶ ಸ್ಥಾಪಿಸಲು ಯೋಗ್ಯವಲ್ಲದ ಸ್ಥಳ ಇದಾಗಿದೆ. ಕೈಗಾರಿಕೆ ಪ್ರಾಂಗಾಣಕ್ಕೆ ಹೊಂದಿಕೊಂಡು ಸುಮಾರು 450 ಹೆಚ್ಚು ಬಡ ಕುಟುಂಬಗಳ ಗುಡಿಸಲುಗಳಿವೆ. ಕೂಗಳತೆಯ ದೂರದಲ್ಲಿ ಮುರಾಜಿ ದೇಸಾಯಿ ವಸತಿ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ಭಜನಾ ಸಪ್ತಾಹ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,

ಜೀವಂತ ನಾಗರ ಹಾವಿಗೆ ತನು ಎರೆದು ನಾಗರಪಂಚಮಿ ಆಚರಣೆ

ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಒಂದು ಹಾವಿಗೆ ಮನೆಯವರ ಜೊತೆಗೂಡಿ ತನು ಎರೆದು, ಪೂಜೆ ಮಾಡಿ, ನಾಗರ ಪಂಚಮಿ ಆಚರಿಸಿದರು. ಕಾಪು ಪರಿಸದಲ್ಲಿ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ