Home ಕರಾವಳಿ Archive by category ಉಡುಪಿ (Page 155)

ಶಿರ್ವ: ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ಶವ ಪತ್ತೆ

ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ  ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ

ಮೀನು ಖರೀದಿಗೆ ಬಹಿಷ್ಕಾರ ಹಾಕಿ ಮಹಿಳೆಯರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಯಶ ಕಾಣದು: ಸದಾನಂದ ಉಪ್ಪಿನಕುದ್ರು

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ಭಾನುವಾರ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಮೂಲಕ ಮೀನುಗಾರ ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡಿದರು. ಈ ವೇಳೆಯಲ್ಲಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ

ಹಿಂಜಾವೇ ಕಾರ್ಯಕರ್ತರಿಗೆ ಠಾಣಾಧಿಕಾರಿ ಹೊಡೆದಿದ್ದಾರೆಂಬ ಆರೋಪ ಕಾರ್ಯಕರ್ತರಿಂದ ನಗರ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ಅನ್ಯಧರ್ಮದ ಹುಡಗನೊಬ್ಬ ಚೈತ್ರಾ ಕುಂದಾಪುರ ಅವರ ಬಗ್ಗೆ ಅವಹೇಳನಕಾರಿ ವ್ಯಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆ ಆ ಹುಡುಗ ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಜಗಳ ನಡೆದಿತ್ತು. ಘಟನೆಯ ಬಳಿಕ ಹಿರಿಯರ ನೇತೃತ್ವದಲ್ಲಿ ನಗರ

ಉದ್ಯಾವರ: ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಗೂಡ್ಸ್ ಟೆಂಪೋ

ರಸ್ತೆ ವಿಭಾಜಕಕ್ಕೆ ಗೂಡ್ಸ್ ಟೆಂಪೋವೊಂದು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಅಪಘಾತದಲ್ಲಿ ಟೆಂಪೋ ಚಾಲಕನ ಕೈ ಮೂಳೆ ಮುರಿತಕ್ಕೊಳಗಾಗಿದೆ. ಮಂಗಳೂರು ಕಡೆಯಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಿದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿದರು.  

ಪಡುಬಿದ್ರಿ:ವಿಷದ ಹಾವು ಕಡಿದು ವ್ಯಕ್ತಿ ಸಾವು

ಪಡುಬಿದ್ರಿ: ತೆನೆ ಹಬ್ಬಕ್ಕಾಗಿ ಗದ್ದೆಗೆ ತೆನೆ ತರಳು ಹೋಗಿದ್ದ ವ್ಯಕ್ತಿಗೆ ವಿಷ ಜಂತು ಕಡಿದು ಸಾವನ್ನಪ್ಪಿದ ಘಟನೆ ಎರ್ಮಾಳು ನಟ್ಟಿ ಮನೆ ಎಂಬಲ್ಲಿ ನಡೆದಿದೆ. ಎರ್ಮಾಳು ಮಲ್ಲಕ್ಕ ನಟ್ಟಿ ಮನೆ ನಿವಾಸಿ ಚಂದ್ರಶೇಖರ ಪೂಜಾರಿ (44) ಇವರೇ ಈ ದುರ್ದೈವಿ. ಗುರುವಾರ ನಡೆಯಲಿದ್ದ ತೆನೆ ಹಬ್ಬಕ್ಕೆ ತಮ್ಮದೇ ಕೃಷಿ ಗದ್ದೆಗೆ ತೆನೆ ತರಲು ಹೋದಾಗ ಏನೋ ಕಾಲಿಗೆ ಕಡಿದ ಅನುಭವವಾಗಿದ್ದು ಮನೆಗೆ ಬಂದ ಅವರು ಪತ್ನಿ ಉಷಾ ಅವರಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಅವರು ಪರಚಿದಂತಿದ್ದ

ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು: ನಾವುಂದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಳ್ಳಲು ಇನ್ನೂ ಕೂಡ ಸ್ವಾತಂತ್ರ್ಯ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಅವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋ.ರೂ. ವೆಚ್ಚದಲ್ಲಿ

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ

ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸೈನಿಕ ಶ್ರೀ ಗಣಪತಿ ಗೌಡ ಯೆಳ್ ಜಿತ್ ಇವರಿಗೆ ಯುವ ಮೋರ್ಚಾದ ವತಿಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶರತ್

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ