ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ
ಹೆಜಮಾಡಿಯ ನದಿ ಹಾಗೂ ಸಮುದ್ರ ಒಂದಾಗುವ ಅಳುವೆ ಬಾಗಿಲಿಗೆ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಸಮುದ್ರದ ಬೃಹತ್ ಅಲೆಯ ದಾಳಿಗೆ ತುತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಹೆಜಮಾಡಿ ಕೋಡಿ ಮಾನಂಪಾಡಿ ನಿವಾಸಿ ಜಯಂತ್ (51).ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಹೊಂದಿದ್ದ ಇವರು ಮುಂಜಾನೆ ತೀರ ಮೀನುಗಾರಿಕೆ ನಡೆಸುವುದಕ್ಕಾಗಿ ಅಳವೆ ಪ್ರದೇಶಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ ಕಾಪುವಿನಲ್ಲಿ ನಡೆಯಿತು. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ, ಕೇಂದ್ರ ಸರ್ಕಾರಗಳ ಹಾಗೂ ಕಾಪು ಶಾಸಕರ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಾರೆ. ನೂರಾರು ಕಾರ್ಯಕರ್ತರು ಕಾಪು ರಾಜೀವ ಭವನದಿಂದ ಜಾಥದ ಮೂಲಕ ಶಾಸಕರ ಕಛೇರಿಯ ಮುಂಭಾಗದಲ್ಲಿ ಸಾಮಾಜಿಕ ಅಂತರದಲ್ಲಿ ನಿಂತು ಪ್ರತಿಭಟನೆಗೆ ಸಾತ್
ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ ಹೊಳೆ ತುಂಬಿ ಹರಿಯುತ್ತಿದ್ದು,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು ಸಮಯಗಳಿಂದ ಶಿಥಿಲವಸ್ಥೆಗೊಂಡಿತ್ತು.ಶನಿವಾರ ಮಧ್ಯಾಹ್ನ ಕಾಲು ಸೇತುವೆ ಯ ಒಂದು ಭಾಗ ಕುಸಿದು ಬಿದ್ದಿದ್ದು,ಸ್ಥಳೀಯ ಯುವಕರು ತಾತ್ಕಲಿಕವಾಗಿ ಮರದ ದಿಮ್ಮಿಗಳನ್ನು ಹಾಕಿ ಸರಿಪಡಿಸಲು ಹರಸಹಾಸ
ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು ಅದಮಾರು ಶಿಕ್ಷಣ ಸಂಸ್ಥೆಯ ವಾಹನದ ಚಾಲಕನಾಗಿದ್ದು, ಬೆಳಿಗ್ಗೆ ಪಡುಬಿದ್ರಿಗೆ ದಿನಬಳಕೆ ಸಾಮಗ್ರಿ
ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್‌ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್‌ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್
ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ