ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ
ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್‌ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್‍ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು ಕೊಪ್ಪಳದಲ್ಲಿ ಕರುನಾಡ ಸಂಭ್ರಮ ಕಿರು ಚಿತ್ರೋತ್ಸವ ಸೀಸನ್-02ರಲ್ಲಿ ನಾಡು, ನುಡಿ, ಸಂಸ್ಕೃತಿಕ ಝೇಂಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ
ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ
ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100 ಪ್ರದರ್ಶನವನ್ನು ಪೂರೈಸಿದ್ದು, 115ನೇ ಪ್ರದರ್ಶನವರೆಗೂ ಬುಕ್ಕಿಂಗ್ ಪಡೆದುಕೊಂಡಿದೆ. ಜಿಲ್ಲೆ
ಪಡುಬಿದ್ರಿಯ ಹೆಜಮಾಡಿ ಬೇಬಿ ಐಸ್ ಪ್ಲ್ಯಾಂಟ್ ಸಮೀಪದಲ್ಲಿ ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭಗೊಂಡಿತು. ನೂತನ ಘಟಕವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಬಳಿಕ ದೀಪ ಬೆಳಗಿಸಿ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನೀರಿನ ವಿಚಾರದಲ್ಲಿ ಉಡುಪಿ ಜಿಲ್ಲೆಯ ಜನತೆ ಅತ್ಯಂತ ಭಾಗ್ಯಶಾಲಿಗಳು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಶುದ್ಧ ನೀರು ಉತ್ಪಾದನಾ ಘಟಕ ಸುಪ್ರ ಉದ್ಘಾಟನೆಗೊಂಡಿರುವುದು ಹೆಮ್ಮೆಯ ವಿಚಾರ
ತೋಕೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಯುವ ವೇದಿಕೆಯ ಪ್ರಾಯೋಜಕತ್ವದಲ್ಲಿ ಉಚಿತ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಿಂದ ಎಪ್ರಿಲ್ 13ರ ವರೆಗೆ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಂದು ತೋಕೂರಿನ ಎಸ್. ಕೋಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ನೀತಿ ಶಿಕ್ಷಣ, ನೃತ್ಯ ತರಬೇತಿ, ಭಜನೆ ಮತ್ತು ಸಂಗೀತ, ನೀತಿ ಕಥೆಗಲು,
ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ
ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ ಒಪ್ಪಿಗೆಯೊಂದಿಗೆ ಶುಭ ಹಾರೈಸಿದರು.




























