Home ಕರಾವಳಿ Archive by category ಉಡುಪಿ (Page 18)

ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿ ನೂತನ ದೇಗುಲಗಳ ಲೋಕಾರ್ಪಣೆ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿನೂತನ ದೇಗುಲಗಳ ಲೋಕಾರ್ಪಣೆ ಹಾಗೂ ದೇವರು, ದೈವಗಳ ಪುನ‌ರ್ ಪ್ರತಿಷ್ಠಾ ಮಹೋತ್ಸವ ದಿನಾಂಕ 04-05-2025ನೇ ರವಿವಾರದಿಂದ 06-05-2025ನೇ ಮಂಗಳವಾರದವರೆಗೆ ಸಂಭ್ರಮದಲ್ಲಿ ನಡೆಯಲಿದೆ. ದಿನಾಂಕ 4-05-2025ರ ಸಂಜೆ 4-00 ಗಂಟೆಯಿಂದ

ವಿ4 ನ್ಯೂಸ್‌ನ ಪತ್ರಕರ್ತ ಕೆ.ಎಂ.ಖಲೀಲ್ ಅವರಿಗೆ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ

ಕೊಪ್ಪಳ: ನಗರದ ಜೆಕೆಎಸ್ ಹೊಟೆಲ್ ನಲ್ಲಿ ಕವಿತಾ ಮಿಡಿಯಾ ಸೋರ್ಸ್ ಪ್ರೈ.ಲಿ. ಹೈಬ್ರೀಡ್ ನ್ಯೂಸ್ ವತಿಯಿಂದ ಕರುನಾಡ ಸಂಭ್ರಮ ಕಿರುಚಿತ್ರೋತ್ಸವ ಸೀಜನ್-2 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪತ್ರಕರ್ತರಾದ ಶರಣಬಸವ ಹುಲಿಹೈದರ್ ,ಬಸವರಾಜ ಕೊಪ್ಪಳ ಆಯ್ದ ಕಿರುಚಿತ್ರಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಡಾ.ಮಹಾಂತೇಶ

ಕಾರ್ಕಳ: ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಅಲ್ಲಿಂದ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಗಂಟಿಹೊಳೆ ಕರೆ

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ- ಪ್ರಸಾದ್ ರಾಜ್ ಕಾಂಚನ್

ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ ದಾಳಿಯಲ್ಲ. ಅದು ಮನುಷ್ಯತ್ವದ ವಿರುದ್ಧದ ದಾಳಿ, ಈ ನೆಲದ ಅಸ್ಮಿತೆಯ ಮೇಲಿನ ದಾಳಿ. ಈ ದಾಳಿಯ ಹಿಂದಿನ

V4 ನ್ಯೂಸ್ ವರದಿಗಾರ ಕೆ.ಎಂ. ಖಲೀಲ್‌ ಅವರಿಗೆ  ‘ಮಾಧ್ಯಮ ರತ್ನ ಪ್ರಶಸ್ತಿ’

ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್‌ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್‍ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು ಕೊಪ್ಪಳದಲ್ಲಿ ಕರುನಾಡ ಸಂಭ್ರಮ ಕಿರು ಚಿತ್ರೋತ್ಸವ ಸೀಸನ್-02ರಲ್ಲಿ ನಾಡು, ನುಡಿ, ಸಂಸ್ಕೃತಿಕ ಝೇಂಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ

ಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು.ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ: ಬೈಂದೂರು ಶಾಸಕ ಗಂಟಿಹೊಳೆ

ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ

ಕಾರ್ಕಳ : ಎ.20ರಂದು ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ

ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100 ಪ್ರದರ್ಶನವನ್ನು ಪೂರೈಸಿದ್ದು, 115ನೇ ಪ್ರದರ್ಶನವರೆಗೂ ಬುಕ್ಕಿಂಗ್ ಪಡೆದುಕೊಂಡಿದೆ. ಜಿಲ್ಲೆ

ಪಡುಬಿದ್ರಿ: ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭ

ಪಡುಬಿದ್ರಿಯ ಹೆಜಮಾಡಿ ಬೇಬಿ ಐಸ್ ಪ್ಲ್ಯಾಂಟ್ ಸಮೀಪದಲ್ಲಿ ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭಗೊಂಡಿತು. ನೂತನ ಘಟಕವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಬಳಿಕ ದೀಪ ಬೆಳಗಿಸಿ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನೀರಿನ ವಿಚಾರದಲ್ಲಿ ಉಡುಪಿ ಜಿಲ್ಲೆಯ ಜನತೆ ಅತ್ಯಂತ ಭಾಗ್ಯಶಾಲಿಗಳು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಶುದ್ಧ ನೀರು ಉತ್ಪಾದನಾ ಘಟಕ ಸುಪ್ರ ಉದ್ಘಾಟನೆಗೊಂಡಿರುವುದು ಹೆಮ್ಮೆಯ ವಿಚಾರ