ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ ಮಹಿಳೆ ಸಹಿತ ಮಕ್ಕಳಿಬ್ಬರಿಗೆ ಗಾಯವಾಗಿದ್ದು ಪಾರಾಗಿದ್ದಾರೆ.
ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ
ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.
ಸಿದ್ದಾಪುರ: ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್ ಕಾಂಪ್ಲೆಕ್ಸ್ ಪಕ್ಕದಲ್ಲಿ ಇರುವ ಸರ್ವಿಸ್ ಸ್ಟೇಷನ್ ನಲ್ಲಿ ನಿರಂತರವಾಗಿ ಟ್ಯಾಂಕರ್‌ನ ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಮಾ. 10ರಂದು ರಾತ್ರಿ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇದರ ಪ್ರಮುಖ ಸೂತ್ರಧಾರ ವಿಜಯ ನಾಯ್ಕ ಪರಾರಿಯಾಗಿದ್ದು, ಟ್ಯಾಂಕರ್ ಚಾಲಕ ಜಯರಾಮ ಎಂಬಾತನನ್ನು ಬಂಧಿಸಿ ಆತನಿಗೆ ನ್ಯಾಯಾಂಗ ಬಂಧನ
ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24
ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ
ಕುಖ್ಯಾತ ದನಕಳ್ಳ ಮೊಹಮ್ಮದ್ ಯೂನಸ್ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದನಕಳ್ಳ ಮೊಹಮ್ಮದ್ ಯೂನಸ್‌ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ
ಬೈಂದೂರು : ಮೀನುಗಾರಿಕೆ, ಮೀನುಗಾರರನ್ನು ಮತ್ತು ಕರಾವಳಿಯನ್ನು ದ್ವೇಷಿಸುವ ಬಜೆಟ್ ಇದಾಗಿದೆ. ರಾಜ್ಯದ ಆರ್ಥಿಕತೆಗೆ ತನ್ನದೆ ಕೊಡುಗೆ ನೀಡುತ್ತಾ ಬರುತ್ತಿರುವ ಮೀನುಗಾರಿಕೆ ವಲಯದ ಉತ್ತೇಜನಕ್ಕೆ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಅಲ್ಲದೆ, ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಾಕಷ್ಟು
ಹಳೆಯಂಗಡಿ, ಓಂ ಕ್ರಿಕೆಟರ್ಸ್ ಪಾವಂಜೆ ವತಿಯಿಂದ 16ನೇ ವಾರ್ಷಿಕೋತ್ಸವವನ್ನು ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ವೇದಿಕೆಯಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಬ್ರಹ್ಮಶ್ರೀ ನಾರಾಯಣ ಗುರು ಸಂಘ ಹಳೆಯಂಗಡಿ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ್, ಜ್ಞಾನಶಕ್ತಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಪಾವಂಜೆ ಇಲ್ಲಿನ ಆಡಳಿತ ಮೊಕ್ತೇಸರರಾದ ಶ್ರೀ




























